ದಿನದ ಸುದ್ದಿ

ಯುವಬರಹಗಾರರಿಗೆ ಪ್ರೋತ್ಸಾಹ ಧನ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ, ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ 2018ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಆಸಕ್ತರು 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರಗಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಹುದುದಾಗಿದೆ.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಪದವಿಗೆ ಸಿದ್ಧಪಡಿಸಿದ ಪ್ರಭಂದಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ, ಪ್ರಬಂಧ, ಮುಂತಾದ ಕನ್ನಡ ಸಾಹಿತಿಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.

ಅರ್ಜಿಗಳನ್ನು ಜುಲೈ 6 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಮೊದಲನೇ ಮಹಡಿ, ಜೆಸಿ ರಸ್ತೆ, ಬೆಂಗಳೂರು-560 002 ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22484516 ಸಂಪರ್ಕಿಸಿ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version