ದಿನದ ಸುದ್ದಿ
ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಿಗೆ 2024ನೇ ಸಾಲಿನಲ್ಲಿ ಪ್ರಕಟಿಸಿರುವ ಪುಸ್ತಕಳಿಗೆ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಅಕಾಡೆಮಿಯಿಂದ ಪಡೆದು ಜುಲೈ 10 ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ ರಸ್ತೆ ಬೆಂಗಳೂರು-560002 ಇವರಿಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:080-22113146 ನ್ನು ಸಂಪರ್ಕಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243