ದಿನದ ಸುದ್ದಿ
ರಾಜ್ಯಮಟ್ಟದ ಪುಸ್ತಕ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನ
ಸುದ್ದಿದಿನ,ಬೆಂಗಳೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2019 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ 2018ರ ಜುಲೈ 30ರೊಳಗೆ ಕಾಫಿರೈಟ್ ಮಾಡಿಸಿರುವ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಸಮಿಗೆ ಆಯ್ಕೆಗಾಗಿ ಆರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಇಲಾಖಾ ಅಂತರ್ಜಾಲwww.karnatakapubliclibrary.gov.in ಮೂಲಕ ಅಥವಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನೋಂದಣಿಯಾಗಿರುವ ಪುಸ್ತಕದ ಒಂದು ಪ್ರತಿಯೊಂದಿಗೆ ಜುಲೈ 31 ರೊಳಗಾಗಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-01 ಇಲ್ಲಿಗೆ ಸಲ್ಲಿಸುವುದು. ಮಾಹಿತಿಗಾಗಿ ದೂ.ಸಂ :080-22864990/22867358 ಗಳನ್ನು ಸಂಪರ್ಕಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243