ದಿನದ ಸುದ್ದಿ
ಮೈಸೂರು ದಸರಾ : ಅ.10 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ
ಸುದ್ದಿದಿನ, ಮೈಸೂರು : ಜಗತ್ತಿನ ಪ್ರಸಿದ್ದ ಮೈಸೂರು ದಸರಾ ಉತ್ಸವ-2018ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 10 ರಿಂದ ಅಕ್ಟೋಬರ್ 19 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2018 ನ್ನು ಮೈಸೂರಿನ ಕಾಡಾ ಮೈದಾನದಲ್ಲಿ ಏರ್ಪಡಿಸಲಾಗುವುದು.
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.2 ಸಾವಿರಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ಹೆಸರಿನಲ್ಲಿ ಡಿಡಿ ಯನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ. ಬೆಂಗಳೂರಿನ ಕಚೇರಿ ಅಥವಾ ಆಯಾಯ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ http://kannadapustakapradhikara.com/
ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ ಯೊಂದಿಗೆ ಅಕ್ಟೋಬರ್ 06 ರ ಸಂಜೆ 5 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail ರ ಮೂಲಕ ಸಲ್ಲಿಸಲು ಕೋರಲಾಗಿದೆ. ನಿರ್ಮಿಸಲಾಗುವ 50 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು-560002 ದೂರವಾಣಿ ಸಂಖ್ಯೆ 080-22484516/22107704 ಅನ್ನು ಸಂಪರ್ಕಿಸಬಹುದಾಗಿದೆ. ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಅವರು ತಿಳಿಸಿದ್ದಾರೆ.