ದಿನದ ಸುದ್ದಿ
ಮೈಮೇಲೆ ಬಿಸಿ ಸಾಂಬಾರ್ ಬಿದ್ದು ಬಾಲಕ ಸಾವು
ಸುದ್ದಿದಿನ, ಚನ್ನಗಿರಿ : ಮೈಮೇಲೆ ಬಿಸಿ ಸಾಂಬಾರ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 12 ವರ್ಷದ ಬಾಲಕ ಸಮರ್ಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಚನ್ನಗಿರಿ ತಾಲ್ಲೂಕಿನ ಯಲೋದಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಹನುಮಂತ-ಶೃತಿ ಅವರ ದಂಪತಿಯ ಎರಡನೇ ಮಗ ಸಮರ್ಥ್. 2 ದಿನದ ಹಿಂದೆ ಮನೆಯಲ್ಲಿ ಆಟವಾಡುವ ವೇಳೆ ಮೈಮೇಲೆ ಬಿಸಿ ಸಾಂಬಾರ್ ಬಿದ್ದು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಮಗನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243