ಸಿನಿ ಸುದ್ದಿ
ಮೆದುಳು ನಿಷ್ಕ್ರಿಯ | ನಟ ಸಂಚಾರಿ ವಿಜಯ್ ಅಂಗಾಗ ದಾನ ಮಾಡಲು ಕುಟುಂಬಸ್ಥರ ನಿರ್ಧಾರ
ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಜಯ್ ಸಹೋದರ ಸಿದ್ಧೇಶ್ ಅವರ ಅಂಗಾಗಳನ್ನು ದಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಶನಿವಾರ ರಾತ್ರಿ ಬೈಕ್ ಅಪಘಾತಕ್ಕೀಡಾಗಿ ಸಂಚಾರಿ ವಿಜಯ್ ತಲೆಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಸ್ಥಳೀಯರು ಅವರನ್ನು ಬನ್ನೇರುಘಟ್ಟ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸದ್ಯ ನಟ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾದಲ್ಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243