ಲೈಫ್ ಸ್ಟೈಲ್
ರೆಸಿಪಿ | ‘ಬ್ರೆಡ್ ರೋಲ್ಸ್’ ಮಾಡ್ಕೊಳಿ, ತಿನ್ಕೊಳಿ..!
ಸುದ್ದಿದಿನ ಡೆಸ್ಕ್ : ಬೇಸಿಗೆ ಬಂತು ಮಕ್ಕಳಿಗೆ ರಜೆ ಕೂಡ ಬರುತ್ತಿದೆ. ಮನೆಯಲ್ಲೇ ಮಕ್ಕಳಿಗೆ ಆರೋಗ್ಯಕರ ಹಾಗೂ ರುಚಿಕರವಾದದನ್ನು ಮಾಡಿಕೊಡುವುದರಿಂದ ಮಕ್ಕಳಿಗು ಖುಷಿ. ಬ್ರೆಡ್ ರೋಲ್ಸ್ ಹೇಗೆ ಮಾಡುವುದು ಯಾವ ಯಾವ ಪದಾರ್ಥಗಳು ಬೇಕು ತಿಳಿಯೋಣ.
ಬೇಕಾಗುವ ಪದಾರ್ಥಗಳು
- ಬ್ರೆಡ್ – 1 ಪ್ಯಾಕಟ್
- ಎಣ್ಣೆ -ಕರಿಯಲು
- ಕ್ಯಾರೆಟ್ – 1
- ಬೀನ್ಸ್ – ಸ್ವಲ್ಪ
- ಟಮೋಟೋ – 1 ಕಾಲಿಫ್ಲವರ್ – ಸ್ವಲ್ಪ
- ಹಸಿ ಬಟಾಣಿ -1
- ಶುಂಠಿ – ಸ್ವಲ್ಪ
- ಈರುಳ್ಳಿ -1
- ಖಾರದ ಪುಡಿ – ಸ್ವಲ್ಪ
- ಹಸಿಮೆಣಸಿನಕಾಯಿ – ಸ್ವಲ್ಪ
- ಗರಂ ಮಸಾಲಾ – ಸ್ವಲ್ಪ
- ಅರಿಶಿನ – ಸ್ವಲ್ಪ
- ಆಲೂಗಡ್ಡೆ -500 ಗ್ರಾಂ
- ನಿಂಬೆ ರಸ – ಒಂದು ಚಮಚ
- ಕ್ಯಾಪ್ಸಿಕಂ – ಒಂದು
- ಕೊತ್ತಂಬರಿ ಸೊಪ್ಪು – ಒಂದು ಕಂತೆ
- ಉಪ್ಪು – ರುಚಿಗೆ
ಮಾಡುವ ವಿಧಾನ
ಮೇಲೆ ಹೇಳಿರುವ ತರಕಾರಿಗಳನ್ನು ಸಣ್ಣಗೆ ಹೆಚ್ಚಿ ಕೊಳ್ಳಿ. ಆಲೂಗಡ್ಡೆಯನ್ನು ಪ್ರತ್ಯೇಕವಾಗಿ ಬೇಯಿಸಿಕೊಂಡು ತಣ್ಣಹಾದ ನಂತರ ಸಿಪ್ಪೆ ತೆಗೆದು ನುಣ್ಣಗೆ ಪುಡಿ ಮಾಡಿಕೊಳ್ಳಿ. ಉಳಿದ ತರಕಾರಿಗಳನ್ನು ಸಣ್ಣಗೆ ಹೆಚ್ಚಿಕೊಂಡು ಬೇಯಿಸಿ.
ಈರುಳ್ಳಿ, ಕ್ಯಾಪ್ಸಿಕಂನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಶುಂಠಿ ಮತ್ತು ಹಸಿಮೆಣಸಿನಕಾಯಿಯನ್ನು ನುಣ್ಣಗೆ ಅರೆದು ಪೇಸ್ಟಿನಂತೆ ಮಾಡಿಕೊಳ್ಳಿ. ಈ ಪೇಸ್ಟ್ ತುಂಬಾ ಆರೋಗ್ಯಕರ ಹಾಗೂ ರುಚಿಕರ.
ಒಂದು ದಪ್ಪ ತಳದ ಬಾಣಲೆಗೆ ಎಣ್ಣೆ ಹಾಕಿಕೊಂಡು ಕಾದ ನಂತರ ಸಾಸಿವೆ ಹಾಕಿ ಒಗ್ಗರಣೆ ಮಾಡಿ. ಹೀಗೆ ಕಾದ ಎಣ್ಣೆಗೆ ಬೆಳ್ಳುಳ್ಳಿ ಹಸಿಮೆಣಸಿನಕಾಯಿ ಪೇಸ್ಟ್ ಹಾಕಿ ಫ್ರ್ಯೆಮಾಡಿಕೊಳ್ಳಿ. ಹೆಚ್ಚಿದ ಈರುಳ್ಳಿ, ಕ್ಯಾಪ್ಸಿಕಂ ಹಾಕಿ.ನಂತರ ಬೇಯಿಸಿದ ತರಕಾರಿಗಳನ್ನು ಹಾಕಿ. ಎಲ್ಲವನ್ನು ಚೆನ್ನಾಗಿ ಬೆರೆಸಿ.
ಕೊನೆಗೆ ಬೇಯಿಸಿದ ಆಲೂಗಡ್ಡೆಯನ್ನು ಹಾಕಿ. ಚೆನ್ನಾಗಿ ಕಲೆಸಿದ ನಂತರ ಗರಂ ಮಸಾಲಾ, ಖಾರದಪುಡಿ, ಉಪ್ಪು, ಅರಿಶಿನ ಹಾಕಿ ಬೇಯಿಸಿ. ಪಲ್ಯವನ್ನು ಕೆಳಗಿಳಿಸಿ ನಿಂಬೆರಸ ಹಿಂಡಿ. ಕೊತ್ತಂಬರಿ ಸೊಪ್ಪಿನಿಂದ ಅಲಂಕಾರ ಮಾಡಿ. ಬ್ರೆಡ್ ನಲ್ಲಿ ಇಡಲು ಪಲ್ಯ ರೆಡಿ.
ಈಗ ಬ್ರೆಡ್ ಪೀಸುಗಳನ್ನು ತೆಗೆದುಕೊಳ್ಳಿ. ಬ್ರೆಡ್ ನ ಅಂಚುಗಳನ್ನು ತೆಗೆದು ಹಾಕಿ. ಬ್ರೆಡ್ ಪೀಸನ್ನು ನೀರಿನಲ್ಲಿ ಅದ್ದಿ, ತಕ್ಷಣ ನೀರನ್ನು ಹಿಂಡಿ. ಬ್ರೆಡ್ ನ ಮಧ್ಯಕ್ಕೆ ಪಲ್ಯ ಇಟ್ಟು ಸುತ್ತಲೂ ರೋಲ್ ನಂತೆ ಸುತ್ತಿ.
ಹೀಗೆ ಮಾಡಿಕೊಂಡ ಬ್ರೆಡ್ ನ ತುಂಡುಗಳನ್ನು ಸುಮಾರು 2 ಗಂಟೆಗಳ ಕಾಲ ಫಿಜರ್ ನಲ್ಲಿ ಇಡಿ. ನಂತರ ತೆಗೆದು ಎಣ್ಣೆಯಲ್ಲಿ ಕರಿಯಬೇಕು. ಈಗ ಬಿಸಿ ಬಿಸಿಯಾದ ರುಚಿಯಾದ ಆರೋಗ್ಯಕರ ಮಕ್ಕಳಿಗೆ ಇಷ್ಟವಾಗುವ ಬ್ರೆಡ್ ರೋಲ್ಸ್ ರೆಡಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


