ದಿನದ ಸುದ್ದಿ
BREAKING: ಹಿರಿಯೂರು ಬಳಿ ನಾಲ್ವರ ದುರ್ಮರಣ
ಸುದ್ದಿದಿನ ಡೆಸ್ಕ್: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬುಧವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.
ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ತೌಸಿಫ್ ಅಹಮ್ಮದ್, ಶಾರೂಕ್ ಸೇರಿದಂತೆ ಇತರೆ ಇಬ್ಬರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ ಕುಳಿತಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದರು ಎಂದು ಟಿವಿ ವಾಹಿನಿಗಳು ವರದಿ ಮಾಡಿವೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.