ದಿನದ ಸುದ್ದಿ

ಬ್ರೇಕಿಂಗ್ | ಹಿಮಾಚಲ ಪ್ರದೇಶ : ಬಿಜೆಪಿ ಸಂಸದ ಶರ್ಮಾ ನೇಣು ಬಿಗಿದು ಆತ್ಮಹತ್ಯೆ…!

Published

on

ಸುದ್ದಿದಿನ, ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಶರ್ಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನು, ಸಂಸದ ಶರ್ಮಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಮನೆಗೆ ತೆರಳಿದಾಗ ಒಳಗಿನಿಂದ ಬಾಗಿಲು ಮುಚ್ಚಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ರಾಮ್ ಸ್ವರೂಪ್ ಶರ್ಮಾ ಅವರನ್ನು ಪೊಲೀಸರು ತಕ್ಷಣ ಆಸ್ಪತ್ರೆಗೆ ಸಾಗಿಸಿದರು ಆದರೆ ವೈದ್ಯರು ದಾರಿಮಧ್ಯೆ ಕೊನೆಯುಸಿರೆಳೆದರು ಎಂದು ಹೇಳಿದ್ದಾರೆ. ನಂತರ ಶರ್ಮಾ ಅವರ ಶವವನ್ನು ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಬಿಜೆಪಿ ಮುಖಂಡ, ಕೇಂದ್ರ ಸಚಿವ ಅನುರಾಗ್ ಠಾಕೂರ್ ಘಟನಾ ಸ್ಥಳ ತಲುಪಿದ್ದಾರೆ.

ರಾಮ್ ಸ್ವರೂಪ್ ಶರ್ಮಾ ಅವರು ಚುನಾವಣಾ ರಾಜಕೀಯಕ್ಕೆ ಸೇರುವ ಮೊದಲು ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು. ಅವರು 2014 ಮತ್ತು 2019 ರಲ್ಲಿ ಎರಡು ಬಾರಿ ಮಂಡಿ ಲೋಕಸಭಾ ಸ್ಥಾನದಿಂದ ಗೆದ್ದಿದ್ದರು. ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲೂ ಸೇವೆ ಸಲ್ಲಿಸಿದರು. ಅವರಿಗೆ ಪತ್ನಿ ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಈ ನಡುವದ ಬಿಜೆಪಿ ಇಂದು ನಿಗದಿಪಡಿಸಿದ್ದ ಸಂಸದೀಯ ಚಟುವಟಿಕೆಗಳನ್ನು ರದ್ದುಗೊಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version