ದಿನದ ಸುದ್ದಿ
ಬ್ರೇಕಿಂಗ್ | ಶಿಂಷಾ ನದಿಗೆ ಹೋಟೆಲ್ ತ್ಯಾಜ್ಯ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು : ವಿಡಿಯೋ ನೋಡಿ..!
- ವರದಿ : ಗಿರೀಶ್ ರಾಜ್, ಮದ್ದೂರು
ಸುದ್ದಿದಿನ, ಮದ್ದೂರು : ತಾಲ್ಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇರುವ ಎಂಪೈರ್ ಹೋಟೆಲ್ ನವರು ಕೆ.ಕೋಡಿಹಳ್ಳಿ ಗ್ರಾಮದ ಶಿಂಷಾ ನದಿಯ ದಡದಲ್ಲಿ ಹೋಟೆಲ್ ನ ತ್ಯಾಜ್ಯ , ನೀರಿನ ಖಾಲಿ ಬಾಟಲಿ, ಮಧ್ಯಪಾನ ಬಾಟಲಿ, ಮತ್ತು ಆ ಜಾಗದಲ್ಲಿ ಹಂದಿ ಸಾಕಾಣಿಕೆಯನ್ನು ಮಾಡುತ್ತಿದ್ದು ಹಂದಿ ಗೂಡುಗಳಿಂದ ಬರುವ ಗಲೀಜು ನೀರು ಸಹ ಶಿಂಷಾ ನದಿಗೆ ಸೇರುತ್ತೀರುವುದರಿಂದ ಇಂದು ಗ್ರಾಮಸ್ಥರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಈ ಶಿಂಷಾ ನದಿಯ ದಡಗಳಲ್ಲಿ ಪ್ರಸಿದ್ಧ ದೇವಾಲಯಗಳಾದ ಹೊಳೆ ಆಂಜನೇಯ ದೇವಸ್ಥಾನ , ವೈದ್ಯನಾಥೇಶ್ವರ ದೇವಾಲಯ, ಕೊಕ್ಕರೆ ಬೆಳ್ಳೂರು, ಮುತ್ತತ್ತಿ ಅರಣ್ಯ ಪ್ರದೇಶವಿದ್ದು ಈ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪ್ರಾಣಿ ಪಕ್ಷಿಗಳು ಈ ನದಿಯ ನೀರನ್ನೆ ಬಳಸುತ್ತಿದ್ದಾರೆ.
ಕಳೆದ ಒಂದು ವರ್ಷದಿಂದ ಕೊಕ್ಕರೆ ಬೆಳ್ಳೂರು ವ್ಯಾಪ್ತಿಯ ಹಳ್ಳಿಗಳಲ್ಲಿ ಹೆರ್ಜಾಲೆ ಹಾಗೂ ವಿವಿಧ ಕೊಕ್ಕರೆಗಳು ಈ ಕಲುಷಿತ ನೀರನ್ನು ಸೇವಿಸಿ ಮೃತಪಟ್ಟಿವೆ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದರು.
ಗ್ರಾಮದ ರೈತ ಮುಖಂಡ ಭೈರೇಗೌಡ ಮಾತನಾಡಿ ಎಂಪೈರ್ ಹೋಟೆಲ್ ನವರು ಪ್ರತಿದಿನ ರಾತ್ರಿ ಹೋಟೆಲ್ ನ ತ್ಯಾಜ್ಯ ಇತರೆ ವಸ್ತುಗಳನ್ನು ದಡದಲ್ಲಿ ಹಾಕಿ ಬೆಂಕಿ ಹಚ್ಚಿ ಹೊರಟು ಹೋಗುತ್ತಾರೆ ಅದರಿಂದ ಬರುವ ದಟ್ಟ ಹೊಗೆ ಸುತ್ತ ಮುತ್ತ ಹತ್ತು ಎಕರೆ ಪ್ರದೇಶದಲ್ಲಿ ರೇಷ್ಮೆ ಬೆಳೆ ಇದ್ದು ಆ ಬೆಳೆಗಳಲ್ಲಿ ಹೊಗೆ ಬೆರೆತು ರೇಷ್ಮೆ ಬೆಳೆಯಲ್ಲ ಹಾಳಾಗಿ ಹೋಗಿದೆ.
ಇಲ್ಲಿ ಹಂದಿ ಸಾಕಾಣಿಕೆಯನ್ನು ಮಾಡಲು ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿಲ್ಲ ರಾಜ್ಯ ವ್ಯಾಪ್ತಿ ಹಂದಿ ಜ್ವರ ಕಾಣಿಸಿಕೊಂಡಿದ್ದು ಅಕ್ಕಪಕ್ಕದ ಜಮೀನಿನ ರೈತರು ತಮ್ಮ ಜಮೀನುಗಳಲ್ಲಿ ಕೆಲಸಮಾಡಲು ಬಾಯದ ವಾತಾವರಣ ನಿರ್ಮಾಣವಾಗಿದೆ ಎಂದರು.
ಆದ್ದರಿಂದ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಇಲ್ಲಿರುವ ತ್ಯಾಜ್ಯವನ್ನು ಅತೀ ಜರೂರಾಗಿ ವಿಲೇವಾರಿ ಮಾಡಬೇಕು ಮತ್ತು ಎಂಪೈರ್ ಹೋಟೆಲ್ ನವರ ಮೇಲೆ ಗ್ರಾಮ ಪಂಚಾಯಿತಿಯು ಹೋಟೆಲ್ ನ ಉದ್ದಿಮೆ ಪರವಾನಿಗೆಯನ್ನು ರದ್ದು ಮಾಡಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು ನದಿಯನ್ನು ಸಂರಕ್ಷಣೆ ಮಾಡಬೇಕು ಇಲ್ಲದಿದ್ದರೆ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ವಿಜಯ್ ,ರಾಮಣ್ಣ, ಪ್ರದೀಪ್, ರತ್ನಾಕರ,ಗಂಗಣ್ಣ, ಗಿರೀಶ್, ಮಹೇಶ್, ಶ್ರೀನಿವಾಸ್, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


