ದಿನದ ಸುದ್ದಿ
ಬ್ರೇಕಿಂಗ್ | ಮತ್ತೆ ಶಾಲೆಗಳು ಬಂದ್..!
ಸುದ್ದಿದಿನ, ಪುಣೆ : ಕೊರೋನಾ ಸೋಂಕು ಹಬ್ಬುವುದನ್ನು ತಡೆಯಲು ಪುಣೆಯಲ್ಲಿ ಮಾ.31ರವರೆಗೆ ಶಾಲಾ -ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಡಿಸಿಎಂ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ.
ಈಗಾಗಲೇ ಪುಣೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ. ಇನ್ನು, ನಾಗ್ಪುರದಲ್ಲಿ ನಿನ್ನೆಯಿಂದ ಒಂದು ವಾರ ಲಾಕ್ ಡೌನ್ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಿದ್ದು, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಭೀತಿ ಆವರಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243