ದಿನದ ಸುದ್ದಿ
ಬ್ರೇಕಿಂಗ್ : ಸಾಲಬಾಧೆಗೆ ಬೇಸತ್ತು ರೈತ ನೇಣಿಗೆ ಶರಣು
ಸುದ್ದಿದಿನ, ಮದ್ದೂರು : ಸಾಲಬಾಧೆಯಿಂದ ಯುವ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮಾಲಗಾರನಹಳ್ಳಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಲೇಟ್ ಮಲ್ಲಯ್ಯನವರ ಮಗ ರಾಜೇಶ್ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು ಈತನಿಗೆ ಪತ್ನಿ ಪುಷ್ಪಾ ಲತಾ ಸೇರಿದಂತೆ ಓರ್ವ ಪುತ್ರ ಪುತ್ರಿಯನ್ನು ಅಗಲಿದ್ದಾರೆ. ಮೃತರು ಖಾಸಗಿ ವ್ಯಕ್ತಿಗಳಿಂದ 5ಲಕ್ಷಕ್ಕೂ ಅಧಿಕ ಕೈಸಾಲ ಮಾಡಿಕೊಂಡಿದ್ದರು,ಈ ಸಾಲ ತಿರಿಸಲಾಗದೆ ಸೋಮವಾರ ತಡರಾತ್ರಿ ತನ್ನ ಜಮೀನಿನ ಬಳಿ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಮೃತನ ಪತ್ನಿ ಪುಷ್ಪ ಲತಾ ನೀಡಿದ ದೂರಿನ ಮೇರೆಗೆ ಮದ್ದೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ
ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್‍ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ
ಸುದ್ದಿದಿನಡೆಸ್ಕ್:ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34 ಸಾವಿರದ 863 ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ
ಸುದ್ದಿದಿನಡೆಸ್ಕ್:ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನಡೆಸಬೇಕು ಎಂದರು.
ಒಂದು ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು. ಪ್ರತಿ ಆರ್ಥಿಕ ವರ್ಷದಲ್ಲಿ ಜನವರಿ ಮಾಹೆಯ 26, ಏಪ್ರಿಲ್ ಮಾಹೆಯ 24, ಆಗಸ್ಟ್ ಮಾಹೆಯ 15 ಮತ್ತು ಅಕ್ಟೋಬರ್ ಮಾಹೆಯ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಒಂದು ವರ್ಷದಲ್ಲಿ ಒಂದು ವಿಶೇಷ ಮಹಿಳಾ ಗ್ರಾಮಸಭೆ ಮತ್ತು ಒಂದು ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ6 days ago
ಬಾಪೂಜಿ ಪ್ರಬಂಧ ಸ್ಪರ್ಧೆ ; ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ
-
ದಿನದ ಸುದ್ದಿ6 days ago
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ
-
ದಿನದ ಸುದ್ದಿ4 days ago
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ7 days ago
KEA | ನಾಳೆ ಪಿಎಸ್ಐ ಪರೀಕ್ಷೆ, ದಾವಣಗೆರೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಕಟ್ಟೆಚ್ಚರ ; ಇಲ್ಲಿದೆ ಸಂಪೂರ್ಣ ಮಾಹಿತಿ, ಮಿಸ್ ಮಾಡ್ದೆ ಓದಿ
-
ದಿನದ ಸುದ್ದಿ3 days ago
ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ
-
ದಿನದ ಸುದ್ದಿ2 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ