ದಿನದ ಸುದ್ದಿ
ಬ್ರೇಕಿಂಗ್ : ಮುಖ್ಯಮಂತ್ರಿ ಮೇಲೆ ದೂರು ದಾಖಲಿಸಿದ ‘ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನ’
ಸುದ್ದಿದಿನ,ಬೆಂಗಳೂರು : ರೈತ ಮಹಿಳೆ ಮೇಲೆ ಅವಹೇಳನಕಾರಿಯಾಗಿ ಮಾತನಾಡಿದ ಮುಖ್ಯಮಂತ್ರಿಯ ಮೇಲೆ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷರಾದ ಮಲ್ಲಿಕಾರ್ಜುನ ರಾಜು ಅವರು ಒತ್ತಾಯಿಸಿದರು.
ನಂತರ ಮಾತನಾಡಿದ ಅವರು ಮುಖ್ಯಮಂತ್ರಿಯವರು ರೈತರು ಮತ್ತು ರೈತ ಮಹಿಳೆ ಮೇಲೆ ಅವಹೇಳನಕಾರಿಯಾಗಿ ಮಾತನಾಡಿ ಸಮಾಜದಲ್ಲಿ ಗಲಭೆ ಸೃಷ್ಟಿಯಾಗುವಂತೆ ಮಾಡಿದ್ದಾರೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ರೈತರ ಸಭೆಯನ್ನು ನಿರ್ಲಕ್ಷಿಸಿದ್ದರಿಂದ ರೈತರೂ ಬೆಂಗಳೂರು ನಗರಕ್ಕೆ ಬಂದು ಇಲ್ಲಿ ಅವ್ಯವಸ್ಥೆ ಉಂಟು ಮಾಡಿದರು ಮತ್ತು ರೈತ ಮಹಿಳೆ ಮೇಲೆ ಆರೋಪ ಮಾಡಿರುವ ಮುಖ್ಯ ಮಂತ್ರಿಯ ಮೇಲೆ ಸೆಕ್ಷನ್ 504 ( ಸಮಾಜದಲ್ಲಿ ಶಾಂತಿ ಸೌಹಾರ್ದತೆ) ಸೆಕ್ಷನ್ 509( ಮಹಿಳೆಯರ ಬಗ್ಗೆ ನಿಂದನೆ)ರ ಪ್ರಕಾರ ಮಾನವ ಹಕ್ಕುಗಳ ಆಯೋಗಕ್ಕೆ , ಮಹಿಳಾ ಆಯೋಗಕ್ಕೆ , ಪೋಲೀಸ್ ಮಹಾ ನಿರ್ದೇಶಕರಿಗೆ ದೂರನ್ನು ಸಲ್ಲಿಸಿದ್ದು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಹಸಿರು ಕರ್ನಾಟಕ ರೈತ ಸಂಘಟನೆ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ರೆಡ್ಡಿ , ಹಸಿರು ರಾಜ್ಯ ರೈತ ಸಂಘಟನೆ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ , ರೈತ ಸಂಘಟನೆಗಳ ಮುಖಂಡರುಗಳಾದ ಚಿತ್ರದುರ್ಗ ಜಿಲ್ಲೆಯ ತಿಪ್ಪೇಸ್ವಾಮಿ , ಚಿಕ್ಕ ಬಳ್ಳಾಪುರ ಜಿಲ್ಲೆಯ ದೇವಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401