ದಿನದ ಸುದ್ದಿ
ದಾವಣಗೆರೆ | ಆ.14 ರಂದು ಬೃಹತ್ ಲೋಕ್ ಆದಾಲತ್ ; ರಾಜಿ ಸಂಧಾನ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಸದಾವಕಾಶ : ಕೆ.ಬಿ. ಗೀತಾ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಆ. 14 ರಂದು ಬೃಹತ್ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶ ಕಲ್ಪಿಸಲಾಗಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ಹೇಳಿದರು.
ಜಿಲ್ಲೆಯಲ್ಲಿ ಏರ್ಪಡಿಸಲಾಗಿರುವ ಬೃಹತ್ ಲೋಕ ಅದಾಲತ್ ಕುರಿತಂತೆ ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಆ. 14 ರಂದು ಏರ್ಪಡಿಸಲಾಗಿರುವ ಬೃಹತ್ ಲೋಕ ಅದಾಲತ್‍ನಲ್ಲಿ ಕಕ್ಷಿಗಾರರು ಭೌತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಬಹುದು ಅಥವಾ ಇ-ಲೋಕ ಅದಾಲತ್‍ನಲ್ಲಿ ಆನ್‍ಲೈನ್ ಮೂಲಕವೂ ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬೃಹತ್ ಲೋಕ್ ಅದಾಲತ್‍ನ ಪ್ರತಿಯೊಂದು ಪೀಠದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ಒಬ್ಬರು ಪರಿಣತ ವಕೀಲರು ಸಂಧಾನಕಾರರಾಗಿರುತ್ತಾರೆ.
ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ದಾಖಲು ಮಾಡದೆ ಇರುವಂತಹ ವಾಹನ ಅಪಘಾತಕ್ಕೆ ಸಂಬಂಧಿಸಿದ ಪರಿಹಾರ ಪ್ರಕರಣಗಳು, ಭೂ-ಸ್ವಾಧೀನ ಪರಿಹಾರಕ್ಕೆ ಸಂಬಂಧಿತ ಪ್ರಕರಣಗಳು, ಪಾಲುವಿಭಾಗ ದಾವೆಗಳು, ಹಣ ವಾಪಾಸಾತಿ ದಾವೆಗಳು, ಬಾಡಿಗೆದಾರ ಮತ್ತು ಮಾಲೀಕರ ನಡುವಿನ ದಾವೆಗಳು, ಇತರೆ ಸಿವಿಲ್ ವ್ಯಾಜ್ಯಗಳು ಹಾಗೂ ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಜೀವನಾಂಶದ ಅರ್ಜಿ ಪ್ರಕರಣಗಳು, ಕೌಟುಂಬಿಕ ಕಲಹಗಳು, (ವಿಚ್ಚೇದನಾ ಹೊರತುಪಡಿಸಿ) ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಸಾರ್ವಜನಿಕರು ಕಕ್ಷಿಗಾರರು ಪಡೆದುಕೊಂಡು ಅತೀ ಹೆಚ್ಚು ಪ್ರಕರಣಗಳನ್ನು ಬಗೆಹರಿಸಿಕೊಳ್ಳಬೇಕೆಂದು ವಿನಂತಿಸಿದರು.
ಲೋಕ ಅದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲ ಉದ್ದೇಶವೇನೆಂದರೆ ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ, ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಬಹುದು.
ಇದರಿಂದ ಪಕ್ಷಗಾರರ ಮಧ್ಯದಲ್ಲಿರುವ ವೈಮನಸ್ಸು ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ ಇರುವಂತಹ, ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ಕೊಟ್ಟು ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ.
2020ರ ಸೆ.19 ರಂದು ನಡೆದ ಬೃಹತ್ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ 4921 ಪ್ರಕರಣಗಳು ಇತ್ಯರ್ಥಗೊಂಡು 4.47 ಕೋಟಿ ರೂ. ಪರಿಹಾರ, 2020 ಡಿ.19 ರಂದು ನಡೆದ ಲೋಕ್ ಅದಾಲತ್‍ನಲ್ಲಿ 3988 ಪ್ರಕರಣಗಳು ಇತ್ಯರ್ಥಗೊಂಡು 10.16 ಕೋಟಿ ರೂ. ಹಾಗೂ ಮಾ.27ರಂದು ನಡೆದ ಬೃಹತ್ ಲೋಕ್ ಅದಾಲತ್‍ನಲ್ಲಿ 6041 ಪ್ರಕರಣಗಳು ಇತ್ಯರ್ಥಗೊಂಡು ರೂ.11.06 ಪರಿಹಾರ ಒದಗಿಸಲಾಗಿದೆ.
ಹೀಗಾಗಿ ದಿನದಿಂದ ದಿನಕ್ಕೆ ಲೋಕ್‍ಅದಾಲತ್‍ಗಳು ಯಶಸ್ವಿಯಾಗುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಲೋಕ್ ಅದಾಲತ್‍ಗಳು ಯಶಸ್ವಿಯಾಗಲು ಸಮಸ್ತ ವಕೀಲ ವೃಂದದವರು, ಪೊಲೀಸ್ ಇಲಾಖೆಯವರು, ಬ್ಯಾಂಕ್ ಅಧಿಕಾರಿಗಳು, ವಿಮಾ ಅಧಿಕಾರಿಗಳು, ಕಂದಾಯ ಇಲಾಖೆಯವರು, ಕಕ್ಷಿದಾರರು, ಮುಖ್ಯವಾಗಿ ಮಾಧ್ಯಮಗಳು ತುಂಬಾ ಸಹಕಾರ ನೀಡಿದ್ದಾರೆ ಅವರೆಲ್ಲರಿಗೂ ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಧನ್ಯವಾದ ಸಲ್ಲಿಸುತ್ತೇವೆ ಎಂದರು.
ಇದೀಗ ಮತ್ತೊಮ್ಮೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಆ.14 ರಂದು ಬೃಹತ್ ಲೋಕತ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಿರುತ್ತಾರೆ. ಆ ಪ್ರಕಾರವಾಗಿ ಜಿಲ್ಲೆಗಳಲ್ಲಿರುವ ಎಲ್ಲಾ ತಾಲ್ಲೂಕು ಸೇವಾ ಸಮಿತಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬೃಹತ್ ಲೋಕ್ ಅದಾಲತ್‍ನ್ನು ನಡೆಸುವ ಬಗ್ಗೆ ವ್ಯವಸ್ಥೆಯನ್ನು ಮಾಡಿಕೊಂಡಿರುತ್ತೇವೆ. ಅದಾಲತ್ ಅನ್ನು ಯಶಸ್ವಿಗೊಳಿಸಲು ನಿತ್ಯ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.
ಪಕ್ಷಗಾರರು ಸ್ವಇಚ್ಚೆಯಿಂದ ರಾಜಿಗೆ ಒಪ್ಪಿಕೊಂಡರೆ ಮಾತ್ರ ಲೋಕ್ ಅದಾಲತ್‍ನಲ್ಲಿ ಪ್ರಕರಣಗಳು ತೀರ್ಮಾನವಾಗುತ್ತದೆ. ಒಂದು ವೇಳೆ ಉಭಯ ಪಕ್ಷಗಾರರಿಗೆ ಒಪ್ಪಿಗೆ ಇಲ್ಲದಿದ್ದರೆ ಯಾವುದೇ ತೀರ್ಮಾನವಾಗುವುದಿಲ್ಲ, ಅಂತಹ ಪ್ರಕರಣಗಳನ್ನು ಪುನ: ನ್ಯಾಯಾಲಯದಲ್ಲಿಯೇ ಕಾನೂನು ಬದ್ದವಾಗಿ ತೀರ್ಮಾನ ಮಾಡಲಾಗುತ್ತದೆ.
ಈ ರೀತಿ ರಾಜಿ ಮಾಡಿಕೊಂಡ ಪ್ರಕರಣಗಳು ನ್ಯಾಯಯುತವಾಗಿ ಮತ್ತು ಕಾನೂನು ಬದ್ಧವಾಗಿದ್ದರೆ ಮಾತ್ರ ಲೋಕ್ ಅದಾಲತ್‍ನಲ್ಲಿ ಇತ್ಯರ್ಥ ಮಾಡುತ್ತಾರೆ. ಲೋಕ್ ಅದಾಲತ್‍ನಲ್ಲಿ ಮಾಡುವ ಅವಾರ್ಡ್ ಕಾನೂನುಬದ್ಧವಾಗಿರುತ್ತದೆ ಮತ್ತು ನ್ಯಾಯಾಲಯದಲ್ಲಿ ತೀರ್ಮಾನವಾದ ಪ್ರಕರಣಗಳಂತೆ ಅದರ ತೀರ್ಪನ್ನು ಜಾರಿಗೊಳಿಸಬಹುದು.
ಕೋವಿಡ್-19ರ ಮೊದಲನೆ ಮತ್ತು ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿ ಈಗಾಗಲೆ ಪಕ್ಷಗಾರರು ಮತ್ತು ವಕೀಲರು ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆÉ. ಅಲ್ಲದೇ ಇತ್ತೀಚಿನ ಅತೀವೃಷ್ಠಿಯಿಂದ ರೈತರು ಹಾಗೂ ಸಾಮಾನ್ಯ ಜನರು ಬೆಳೆ ಹಾಗೂ ಆಸ್ತಿ-ಪಾಸ್ತಿ ಅನುಭವಿಸಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತಾರೆ.
ಇಂತಹ ಸಂದರ್ಭದಲ್ಲಿ ಹಾಗೂ ಆದಾಯ ಕಡಿಮೆ ಇರುವಂತಹ ಪರಿಸ್ಥಿತಿಯಲ್ಲಿ ತಮ್ಮ ವ್ಯಾಜ್ಯಗಳನ್ನು ಲೋಕ್‍ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಂಡರೆ ಕಕ್ಷಿದಾರರಿಗೆ ಮತ್ತು ವಕೀಲರಿಗೆ ಹೆಚ್ಚನ ಅನುಕೂಲವಾಗುತ್ತದೆ. ಅದಾಲತ್‍ನಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳುವ ಪ್ರಕರಣಗಳ ಸಂಪೂರ್ಣ ಶುಲ್ಕವನ್ನು ನ್ಯಾಯಾಲಯವು ಮರುಪಾವತಿ ಮಾಡುತ್ತದೆ. ವ್ಯಾಜ್ಯಪೂರ್ವ ಪ್ರಕರಣಗಳಿಗೆ ನ್ಯಾಯಾಲಯ ಶುಲ್ಕ ಕೊಡಬೇಕಾಗಿಲ್ಲ.
ಅದಾಲತ್‍ನಲ್ಲಿ ಇತ್ಯರ್ಥ ಮಾಡಿಕೊಂಡ ಪ್ರಕರಣಗಳಿಗೆ ಯಾವುದೇ ಮೆಲ್ಮನವಿ ಹಾಗೂ ರಿವಿಜನ್ ಇರುವುದಿಲ್ಲ. ಮತ್ತು ಇದರಲ್ಲಿ ಆದ ತೀರ್ಮಾನವೆ ಅಂತಿಮ ತೀರ್ಮಾನವಾಗಿರುತ್ತದೆ. ಮತ್ತು ಪಕ್ಷಗಾರರು ಉಭಯತ್ರರು ಒಪ್ಪಿ ರಾಜಿ ಮಾಡಿಕೊಳ್ಳುವುದರಿಂದ ಅವರ ಮಧ್ಯೆ ಸೌಹಾರ್ದತೆ ಹೆಚ್ಚುತ್ತದೆ ಹಾಗೂ ವಿವಾದಗಳು ಕಡಿಮೆಯಾಗುತ್ತದೆ ಇದು ಉತ್ತಮ ಸಮಾಜ ನಿರ್ಮಾಣ ಮಾಡಲು ತುಂಬಾ ಸಹಕಾರಿಯಾಗುತ್ತದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಮೇಲ್ dlsadavanagere@gmail.com ಮೂಲಕ ಮತ್ತು ದೂರವಾಣಿ ಸಂಖ್ಯೆ- 08192-296364, 9481167005 ಮೂಲಕ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಗೀತಾ.ಕೆ.ಬಿ ತಿಳಿಸಿದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರವೀಣ್ ನಾಯಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜು ಸೇರಿದಂತೆ ವಿವಿಧ ವಕೀಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ3 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ3 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



