ರಾಜಕೀಯ

ಅಮಿತ್ ಷಾ ಭೇಟಿ ಮಾಡಲಿರುವ ಯಡಿಯೂರಪ್ಪ; ಲೋಕಸಭಾ ಚುನಾವಣೆ ಸಿದ್ಧತೆ ಚರ್ಚೆ

Published

on

ಸುದ್ದಿದಿನ ಡೆಸ್ಕ್: ನಾಳೆಯಿಂದ ಎರಡು ದಿನ ದೆಹಲಿಯಲ್ಲಿ ನಡರಯಲಿರುವ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಸೇರಿ ಮತ್ತಿತರ ವರಿಷ್ಠ ಮುಖಂಡರೊಂದಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆಯ ಚರ್ಚೆ ನಡೆಸಲಿದ್ದು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಾಧನೆಯ ವರದಿ ಸಲ್ಲಿಸಲಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ 2019ರ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ರಣತಂತ್ರ ಕುರಿತು ಚರ್ಚೆ ನಡೆಯಲಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪಕ್ಷಕ್ಕೆ ಹೆಚ್ಚಿನ ಯಶಸ್ಸು ತಂದು ಕೊಟ್ಟಿಲ್ಲವಾದರೂ ಇತರೆ ಪಕ್ಷಗಳಿಗಿಂತ ಬಿಜೆಪಿ ತೀರಾ ಹಿಂದೆ ಬಿದ್ದಿಲ್ಲ ಎಂಬುದನ್ನು ದೆಹಲಿ ನಾಯಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.

ಲೋಕಸಭೆಗೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರೂ ಬಿಜೆಪಿಗೆ ಕನಿಷ್ಠ 20 ಸ್ಥಾನಗಳಲ್ಲಿ ಗೆಲುವು ತಂದುಕೊಡುವತ ಗಮನ ಹರಿಸುವುದಲ್ಲದೆ, ಸೂಕ ಅಭ್ಯರ್ಥಿಗಳ ಆಯ್ಕೆಗೂ ಹೆಚ್ಚಿನ ಮಹತ್ವ ನೀಡುವಲ್ಲಿ ಚರ್ಚೆ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version