Connect with us

ದಿನದ ಸುದ್ದಿ

ರಾಜ್ಯ ಬಜೆಟ್ ನ ಪಾವಿತ್ರ್ಯವನ್ನೇ ಹಾಳು ಮಾಡಿದ ಬಿ.ಎಸ್.ಯಡಿಯೂರಪ್ಪ : ಸಿದ್ದರಾಮಯ್ಯ ಕಿಡಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು: ‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್‍ಗಳೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ -2021 ರ ಬಗ್ಗೆ ಪ್ರತಿಜ್ರಿಯಿಸಿದ ಅವರು,
ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರ ಪಾರದರ್ಶಕವಾಗಿ ಕೆಲಸ ಮಾಡಬೇಕೆನ್ನುವುದು ಸಂವಿಧಾನಬದ್ಧ ಬದ್ಧತೆ. ಆದರೆ, ಇದೊಂದು ಮುಚ್ಚುಮರೆಯ ಸರ್ಕಾರ. ಈ ಬಜೆಟ್‍ನಲ್ಲಿ ಸರ್ಕಾರ ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಎಂದರು.ಎಂದು ಕಿಡಿಕಾರಿದರು.

ಆಯವ್ಯಯವನ್ನು ಇಲಾಖಾವಾರು ನೀಡದೆ ಆರು ವಲಯಗಳಾಗಿ ವಿಂಗಡಿಸಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ. ಇಲಾಖೆಗಳ ಕಾರ್ಯಕ್ರಮಗಳೇನು, ಕಳೆದ ವರ್ಷದ ಸಾಧನೆಗಳೇನು, ಹೊಸ ಯೋಜನೆಗಳೇನು ಎಂಬ ವಿವರಗಳೇ ಇಲ್ಲ.

ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಬಜೆಟ್‍ಗೆ ಇದ್ದ ಮಹತ್ವ ಮತ್ತು ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ. ರಾಜ್ಯದಲ್ಲಿರುವ 33 ಇಲಾಖೆಗಳನ್ನು ಆರು ವಲಯಗಳನ್ನಾಗಿ ಮಾಡಿ ಗೊಂದಲ ಸೃಷ್ಟಿಸಲಾಗಿದೆ. ಈ ಆರೂ ವಲಯಗಳಿಗೆ ಕಳೆದ ಬಜೆಟ್‍ನಲ್ಲಿ ನಿಗದಿಪಡಿಸಲಾಗಿದ್ದ ಅನುದಾನಕ್ಕಿಂತ ಕಡಿಮೆ ಹಣ ನಿಗದಿಪಡಿಸಲಾಗಿದೆ.

ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ರೂ 1231 ಕೋಟಿ , ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ರೂ 9943 ಕೋಟಿ, ಆರ್ಥಿಕ ಅಭಿವೃದ್ಧಿ ಪ್ರಚೋದನೆ ವಲಯಕ್ಕೆ ರೂ 3203 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ರೂ 997 ಕೋಟಿ, ಸಂಸ್ಕೃತಿ – ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ವಲಯಕ್ಕೆ 1907 ಕೋಟಿ ಕಡಿಮೆ ಅನುದಾನವನ್ನು ನಿಗದಿಪಡಿಸಲಾಗಿದೆ ಎಂದರು.

ಆಡಳಿತ ಸುಧಾರಣಾ ವಲಯಕ್ಕೆ ಮಾತ್ರ ರೂ.42,325 ಕೋಟಿಯಷ್ಟು ಅನುದಾವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಹೆಚ್ಚುವರಿ ಅನುದಾನಕ್ಕೆ ಯಾವ ಹೊಸ ಯೋಜನೆಗಳನ್ನೂ ಪ್ರಕಟಮಾಡಿಲ್ಲ.

ಸಂಕಷ್ಟಗಳ ಸರಮಾಲೆಗೆ ಸಿಲುಕಿರುವ ರೈತರು ದೇಶಾದ್ಯಂತ ಬೀದಿಗಿಳಿದಿದ್ದಾರೆ. ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರನ್ನು ದಿವಾಳಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಜೊತೆ ಸೇರಿರುವ ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲೂ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ಒಂದು ಲಕ್ಷದವರೆಗಿನ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್‍ಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಈ ಸರಕಾರ ಅಧಿಕಾರಕ್ಕೆ ಬಂದ ನಂತರ ಮಂಡಿಸಿದ ಎರಡೂ ಬಜೆಟ್‍ಗಳಲ್ಲೂ ರೈತರ ಸಾಲ ಮನ್ನಾದ ಪ್ರಸ್ತಾಪವೇ ಇಲ್ಲ.

ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ, ಸಹಕಾರ, ಮೀನುಗಾರಿಕೆ, ರೇಷ್ಮೆ ಮೊದಲಾದ ಕೃಷಿ ಸಂಬಂಧಿತ ಇಲಾಖೆಗಳಿಗೆ ಕಳೆದ ಬಜೆಟ್‍ನಲ್ಲಿ ರೂ. 32,259 ಕೋಟಿ ಅನುದಾನ ನೀಡಿದ್ದರೆ ಪ್ರಸಕ್ತ ಬಜೆಟ್‍ನಲ್ಲಿ ರೂ 31,028 ಕೋಟಿ ಅನುದಾನ ಒದಗಿಸಲಾಗಿದೆ. ಅಂದರೆ, ರೂ 1,231 ಕೋಟಿ ಅನುದಾನ ಕಡಿಮೆ ಮಾಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತನ್ನ ಎರಡನೇ ಬಜೆಟ್‍ನಲ್ಲಿ ಕೂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದರು.

2020-21 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಗೆ 26,930 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಬಜೆಟ್ ಗಾತ್ರ ಹೆಚ್ಚಳಕ್ಕೆ ಅನುಗುಣವಾಗಿ ಈ ಯೋಜನೆಗೆ ಅನುದಾನವನ್ನು ಹೆಚ್ಚಿಸಬೇಕಿತ್ತು. ಆದರೆ ಈ ವರ್ಷದ ಬಜೆಟ್‍ನಲ್ಲಿ ನೀಡಲಾಗಿರುವ ಅನುದಾನ ರೂ 26,005 ಕೋಟಿ ಮಾತ್ರ.

ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಅಭಿವೃದ್ಧಿಗಾಗಿ ನಿಗಮವನ್ನು ಸ್ಥಾಪಿಸಿ ತಲಾ ರೂ.500 ಕೋಟಿ ಅನುದಾನ ನಿಗದಿಪಡಿಸಿರುವುದನ್ನು ನಾನು ಸ್ವಾಗತಿಸುತ್ತೇನೆ. ಅಂಬೇಡ್ಕರ್, ವಾಲ್ಮೀಕಿ, ಆದಿಜಾಂಬವ, ಬೋವಿ, ವಿಶ್ವಕರ್ಮ, ಕಾಡುಗೊಲ್ಲರ, ಅಂಬಿಗರ ಚೌಡಯ್ಯ, ಸವಿತಾ ಸಮಾಜ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಒಟ್ಟು ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ತಳಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ.

ಮುಖ್ಯಮಂತ್ರಿಗಳು ಆರ್ಥಿಕತೆ ಸಕಾರಾತ್ಮಕ ಹಾದಿಯಲ್ಲಿ ಇದೆ ಎಂದು ಬಜೆಟ್‍ನಲ್ಲಿ ಹೇಳಿದ್ದಾರೆ. ಆದರೆ ಶೇ.14 ರಷ್ಟು ಪ್ರಗತಿಯಲ್ಲಿದ್ದ ರಾಜ್ಯದ ಆರ್ಥಿಕತೆ ಈ ಬಾರಿಯ ಬಜೆಟ್‌ನಲ್ಲಿರುವ ಅಂಕಿಅಂಶಗಳನ್ನು ನೋಡಿದರೆ ಗಾಬರಿ ಹುಟ್ಟಿಸುವಂತೆ ಇವೆ.

ರಾಜ್ಯ ಆದಾಯ ಎಂದು ಹೇಳುತ್ತಿರುವುದು ಬರಿ ಸಾಲವನ್ನು. ತೆರಿಗೆ ಸಂಗ್ರಹವು ಮುಖ್ಯಮಂತ್ರಿಗಳ ಭಾಷಣದ ಪ್ರಕಾರ ಕರ್ನಾಟಕದಲ್ಲಿ ತುಸು ಸಮಾಧಾನಕರವಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಪ್ರಮಾಣದಲ್ಲಿ ನೀಡದೆ ಹೋದ ಕಾರಣಕ್ಕೆ ರಾಜ್ಯವು ಭೀಕರ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದೆ.

ರಾಜ್ಯದ ಇತ್ತೀಚಿನ ವರ್ಷಗಳಲ್ಲಿಯೆ ಪ್ರಥಮ ಬಾರಿ ರೂ.19,485.84 ಕೋಟಿ ರಾಜಸ್ವ ಕೊರತೆ 2020-21 ರಲ್ಲಿ ಎದುರಾಗಿದೆ. 2021-22 ಕ್ಕೆ ರೂ.15,133 ಕೋಟಿ ರಾಜಸ್ವದ ಕೊರತೆ ಆಗುವುದೆಂದು ಬಜೆಟ್‍ನಲ್ಲಿ ತಿಳಿಸಿದ್ದಾರೆ. 2020-21 ರಲ್ಲಿ ಬಜೆಟ್ ಮಂಡಿಸಿದಾಗ ರೂ.143 ಕೋಟಿ ರಾಜಸ್ವ ಉಳಿಕೆ ಇರುತ್ತದೆ ಎಂದು ಅಂದಾಜಿಸಲಾಗಿತ್ತು ನಂತರದ ಪರಿಷ್ಕೃತ ಬಜೆಟ್‌ನಲ್ಲಿ ರಾಜಸ್ವ ಕೊರತೆ ಎದುರಾಯಿತು. 5 ವರ್ಷದ ನಮ್ಮ ಸರ್ಕಾರದಲ್ಲಿ ರಾಜಸ್ವದ ಕೊರತೆ ಎಂದೂ ಆಗಿಲ್ಲ.

ಬಜೆಟ್‍ನ ಅಂದಾಜಿನ ಪ್ರಕಾರ ವಿತ್ತೀಯ ಕೊರತೆ ಜಿ.ಎಸ್.ಡಿ.ಪಿ.ಯ ಶೇ.3.48 ರಷ್ಟು ಇರುತ್ತದೆ. ಇದರ ಪ್ರಕಾರ 2021-22 ರಲ್ಲಿ ವಿತ್ತೀಯ ಕೊರತೆ ರೂ.59,240 ಕೋಟಿ ಇರುತ್ತದೆ. ಈ ವರ್ಷ ರೂ.71,332 ಕೋಟಿಗಳಷ್ಟು ರಾಜ್ಯ ಸರ್ಕಾರ ಸಾಲ ಪಡೆಯುವುದಾಗಿ ಘೋಷಿಸಿದೆ. ಇದರಿಂದ ಸರ್ಕಾರದ ಮೇಲೆ ಬಹಳಷ್ಟು ಹೊರೆಯಾಗುತ್ತದೆ.

ಎಫ್.ಆರ್.ಬಿ.ಎಂ. ಕಾಯ್ದೆ ಪ್ರಕಾರ ವಿತ್ತೀಯ ಕೊರತೆಯು ಜಿ.ಡಿ.ಪಿ.ಯ ಶೇ.3 ಕ್ಕಿಂತ ಕಡಿಮೆ ಇರಬೇಕೆಂದು ನಿಯಮವಿದೆ. ಆದರೆ ಸರ್ಕಾರವು ಕೊರೋನಾ ಸಂದರ್ಭದಲ್ಲಿ ಸರಿಯಾದ ಆಡಳಿತವನ್ನು ನಡೆಸದೇ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಜಿ.ಎಸ್.ಡಿ.ಪಿ.ಯ ಶೇ.4 ರಷ್ಟು ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ಇದು ಒಳ್ಳೆಯ ಆರ್ಥಿಕ ನೀತಿಯ ಲಕ್ಷಣವಲ್ಲ.

5 ವರ್ಷದ ನಮ್ಮ ಸರ್ಕಾರದಲ್ಲಿ ವಿತ್ತೀಯ ಕೊರತೆಯು ಜಿ.ಎಸ್.ಡಿ.ಪಿಯ. ಶೇ.2.5 ರ ಆಸುಪಾಸಿನಲ್ಲೇ ಇತ್ತು.
2020-21 ರಲ್ಲಿ ಬಿಡುಗಡೆ ಮಾಡಿದ ಮಧ್ಯಮಾವಧಿ ವಿತ್ತೀಯ ಯೋಜನೆ – 2020-2024 ರ ಪ್ರಕಾರ ಹೆಚ್ಚುವರಿ ರಾಜಸ್ವ ನಿರೀಕ್ಷೆಯಲ್ಲಿದ್ದ ರಾಜ್ಯ 2020-21 ರಲ್ಲೇ ದೊಡ್ಡ ಮಟ್ಟದ ರಾಜಸ್ವ ಕೊರತೆಯನ್ನು ಎದುರಿಸುತ್ತಿದೆ.

2022-23 ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳ್ಳುವುದರಿಂದ ಇದರ ಜೊತೆಗೆ ರೂ.30,743 ಕೋಟಿ ರಾಜಸ್ವ ಕೊರತೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. 2023-24 ರಲ್ಲಿ ಈ ರಾಜಸ್ವ ಕೊರತೆಯು ರೂ.46,831 ಕೋಟಿಯಾಗಲಿದೆ.

2020-21 ರಲ್ಲಿ ರೂ.70,411 ಕೋಟಿ ಸಾಲ ಮಾಡಿದೆ. 2019-20 ರವರೆಗೆ ರೂ.3,27,209 ಕೋಟಿ ಸಾಲ ರಾಜ್ಯದ ಮೇಲಿತ್ತು. ನಮ್ಮ ಸರ್ಕಾರದ ಅಂತಿಮ ವರ್ಷದಲ್ಲಿ (2017-18)ರಲ್ಲಿ ರೂ.2,42,420 ಕೋಟಿ ಸಾಲ ಮಾಡಲಾಗಿತ್ತು. ಜಿ.ಎಸ್.ಡಿ.ಪಿಯ ಮೇಲೆ ಸಾಲದ ಪ್ರಮಾಣ ಶೇ.18.93 ಇತ್ತು.

2020-21 ರ ಫೆಬ್ರವರಿ ಅಂತ್ಯಕ್ಕೆ ರಾಜ್ಯದ ಸಾಲ ರೂ.3,97,881 ಕೋಟಿ ಇದೆ. ಮುಂದಿನ ವರ್ಷಕ್ಕೆ ರೂ.4,57,889 ಕೋಟಿಗಳಷ್ಟು ಸಾಲ ರಾಜ್ಯದ ಜನರ ಮೇಲೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಜಿ.ಎಸ್.ಡಿ.ಪಿ.ಯ ಶೇ.26.9 ರಷ್ಟು ಆಗಿದೆ. ಎಫ್.ಆರ್.ಬಿ.ಎಂ. ಕಾಯ್ದೆಯ ನಿಯಮದ ಪ್ರಕಾರ ಜಿ.ಎಸ್.ಡಿ.ಪಿಯ ಶೇ.25 ರಷ್ಟು ಕಡಿಮೆ ಇರಬೇಕು. 5 ವರ್ಷದ ನಮ್ಮ ಸರ್ಕಾರವು ಅದು ಶೇ.20 ರ ಆಸುಪಾಸಿನಲ್ಲಿ ಇತ್ತು.

ರಾಜಸ್ವ ಆದಾಯವು ಕಳೆದ ಬಜೆಟ್ ಅಂದಾಜಿಗಿಂತ ಈ ವರ್ಷದ ಅಂದಾಜಿನಲ್ಲಿ ಸುಮಾರು ರೂ.7,000 ಕೋಟಿಯಷ್ಟು ಕಡಿಮೆಯಾಗಿದೆ. ಕಳೆದ ಬಜೆಟ್‍ನ ಅಂದಾಜು ಮತ್ತು ಪರಿಷ್ಕೃತ ರಾಜಸ್ವ ಸ್ವೀಕೃತಿಯಲ್ಲಿ ರೂ.20,000 ಕೋಟಿಯಷ್ಟು ಕಡಿಮೆಯಾಗಿದೆ. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಮತ್ತು ಅನುದಾನದ ಕೊರತೆಯೇ ಇದಕ್ಕೆ ಹೊಣೆ.

2020-21 ರ ಪರಿಷ್ಕೃತ ವೆಚ್ಚವು ರೂ.2,29,924.73 ಕೋಟಿ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಬಜೆಟ್‍ನ ಅಂದಾಜಿಗಿಂತ ರೂ.8,000 ಕೋಟಿಯಷ್ಟು ಕಡಿಮೆಯಾಗಿದೆ.

2020-21 ರಲ್ಲಿ ರೂ.2,37,893 ಕೋಟಿಗಳಷ್ಟು ಬಜೆಟ್ ಅನ್ನು ಮಂಡಿಸಿದ್ದರೂ ಕಡೆಯದಾಗಿ ಇಲಾಖೆಗಳಿಗೆ ನೀಡಲು ಉದ್ದೇಶಿಸಿದ್ದ ಮೊತ್ತ ರೂ.1,96,369.2 ಕೋಟಿ. ಅದರಲ್ಲಿ ಹಳೆಯ ಬಾಕಿ ರೂ.13,491.7 ಕೋಟಿ. ಒಟ್ಟಿಗೆ ಸೇರಿ ಖರ್ಚು ಮಾಡಲು ಲಭ್ಯವಿದ್ದ ಅನುದಾನ ರೂ.2,09,860 ಕೋಟಿ.

ಇಲಾಖೆಗಳಿಗೆ ಜನವರಿಯವರೆಗೆ ಬಿಡುಗಡೆ ಮಾಡಿದ್ದು ರೂ.1,42,851 ಕೋಟಿ. ಖರ್ಚಾಗಿರುವುದು ರೂ.1,30,998 ಕೋಟಿ ಮಾತ್ರ. 2020-21 ರಲ್ಲಿ ರೂ.2,37,893 ಕೋಟಿಯನ್ನು ಪರಿಷ್ಕರಿಸಿ ರೂ.2,29,925 ಕೋಟಿಗಳಿಗೆ ಇಳಿಸಿಕೊಂಡರು.

ಇದನ್ನೂ ಓದಿ | ರಾಜ್ಯ ಬಜೆಟ್-2021 ವಿಶ್ಲೇಷಣೆ | ಯಡ್ಡಿ ಬಜೆಟ್ – ಉತ್ಪ್ರೇಕ್ಷೆ, ತಾರತಮ್ಯ ಮತ್ತು ಸುಳ್ಳು ಅಂಕಿಅಂಶಗಳ ಕಣ್ಕಟ್ಟು..!

ಕೊರೋನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಿಯೂ ಒಟ್ಟು ಖರ್ಚು ಅವರ ಬಜೆಟ್ ಅಂದಾಜಿಗಿಂತ ಕಡಿಮೆಯಿದೆ. ಇದರಲ್ಲಿ ಇಲಾಖೆಗಳಿಗೆ ಖರ್ಚು ಮಾಡಲು ಸಿಕ್ಕಿದ್ದು ರೂ.1,96,369 ಕೋಟಿ. ಇನ್ನು ಉಳಿದ ರೂ.33,556 ಕೋಟಿಗಳು ಸಾಲ ಮರುಪಾವತಿ ಮತ್ತು ಬಡ್ಡಿ ಪಾವತಿಗೆ ಖರ್ಚಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 2021-22 ರಲ್ಲಿ ಜಿ.ಡಿ.ಪಿ.ಯು ಶೇ.11 ರಷ್ಟು ಬೆಳವಣಿಗೆ ಕಾಣುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹಗಳ ಗುರಿಯು 2020-21 ರ ಮೂಲ ಬಜೆಟ್‍ಗೆ ಹೋಲಿಸಿದರೆ ಶೇ.3.12 ರಷ್ಟು ಕಡಿಮೆಯಾಗಿದೆ.

ಕೇಂದ್ರದ ತೆರಿಗೆ ಪಾಲು 2020-21ರ ಮೂಲ ಬಜೆಟ್‍ನಲ್ಲಿ ರೂ.28,591.23 ಕೋಟಿ ನಿರೀಕ್ಷೆ ಮಾಡಲಾಗಿತ್ತು. 2021-22 ರ ಆಯವ್ಯಯದಲ್ಲಿ ಇದು ರೂ.24,273.6 ಕೋಟಿಗೆ ಇಳಿಯಲಿದೆ. ರೂ.4,318 ಕೋಟಿಗಳಷ್ಟು ಕಡಿಮೆಯಾಗಿದೆ. ಅಂದರೆ ಶೇ.15 ರಷ್ಟು ಕಡಿಮೆಯಾಗಿದೆ.

ದೇಶದ ಜಿ.ಡಿ.ಪಿ.ಯು ಶೇ.11 ಕ್ಕೂ ಹೆಚ್ಚು ಪ್ರಗತಿಯಾಗುವುದಾದರೆ ನಮಗೆ ನೀಡಬೇಕಾದ ತೆರಿಗೆ ಹಂಚಿಕೆಯೂ ಅಷ್ಟೇ ಪ್ರಮಾಣದಲ್ಲಿ ಹೆಚ್ಚಾಗಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರಬೇಕಿತ್ತು ಅಲ್ಲವೇ? ಕೇಂದ್ರ ಮತ್ತು ರಾಜ್ಯಗಳಲ್ಲಿನ ಎರಡೂ ಬಿ.ಜೆ.ಪಿ. ಸರ್ಕಾರಗಳು ಜನರ ತಲೆಗೆ ಟೋಪಿ ಹಾಕುತ್ತಿವೆ ಎಂದರು.

ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ ಮೇಲೆ ವಿಧಿಸಲಾಗುತ್ತಿದ್ದ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ನೆರವಾಗಬೇಕಿತ್ತು ಹಾಗೂ ಕೇಂದ್ರ ಸರ್ಕಾರದ ಮೇಲೆ ತೆರಿಗೆ ಕಡಿತಗೊಳಿಸುವಂತೆ ಒತ್ತಡ ಹೇರಬೇಕಿತ್ತು. ಈ ಅಂಶಗಳೇ ಇಂದಿನ ಬಜೆಟ್‌ನಲ್ಲಿ ಇಲ್ಲ ಎಂದು ಆರೋಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending