ದಿನದ ಸುದ್ದಿ
ಬಜೆಟ್ ನಲ್ಲಿ ಘೋಷಿಸಲಾಗಿರುವ ಯೋಜನೆಗಳು ಈ ತಿಂಗಳಾಂತ್ಯದಲ್ಲಿಯೇ ಅನುಷ್ಠಾನ : ಸಿಎಂ ಬಸವರಾಜ ಬೊಮ್ಮಾಯಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/04/cmbasavarajbommai_suddidina-0751.jpg&description=ಬಜೆಟ್ ನಲ್ಲಿ ಘೋಷಿಸಲಾಗಿರುವ ಯೋಜನೆಗಳು ಈ ತಿಂಗಳಾಂತ್ಯದಲ್ಲಿಯೇ ಅನುಷ್ಠಾನ : ಸಿಎಂ ಬಸವರಾಜ ಬೊಮ್ಮಾಯಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/04/cmbasavarajbommai_suddidina-0751.jpg&description=ಬಜೆಟ್ ನಲ್ಲಿ ಘೋಷಿಸಲಾಗಿರುವ ಯೋಜನೆಗಳು ಈ ತಿಂಗಳಾಂತ್ಯದಲ್ಲಿಯೇ ಅನುಷ್ಠಾನ : ಸಿಎಂ ಬಸವರಾಜ ಬೊಮ್ಮಾಯಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಹರಪನಹಳ್ಳಿ(ವಿಜಯನಗರ): ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಆ ಪ್ರಗತಿಯ ರಿಪೋರ್ಟ್ ಕಾರ್ಡ್ ನೊಂದಿಗೆ ಜನರ ಮುಂದೆ ಹೋಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಎಚ್.ಪಿ.ಎಸ್ ಕಾಲೇಜು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ ಹಾಗೂ ಶಾಸಕ ಕರುಣಾಕರರೆಡ್ಡಿ ಅವರ ಷಷ್ಠ್ಯಾಬ್ದಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಜೆಟ್ ನಲ್ಲಿ ಘೋಷಿಸಲಾಗಿರುವ ಯೋಜನೆಗಳನ್ನು ಈ ತಿಂಗಳಾಂತ್ಯದಲ್ಲಿಯೇ ಅನುಷ್ಠಾನಕ್ಕೆ ಆದೇಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಭಿವೃದ್ಧಿ ಸುತ್ತಲೂ ಜನರಿರಬಾರದು;ಜನರ ಸುತ್ತಲೂ ಅಭಿವೃದ್ಧಿ ಇರಬೇಕು ಎನ್ನುವ ಉದ್ದೇಶದಿಂದ ನಮ್ಮ ಸರಕಾರ ಕಾರ್ಯನಿರ್ವಹಿಸುತ್ತಿದೆ. ಬಜೆಟ್ ನಲ್ಲಿನ ಯೋಜನೆಗಳ ಅನುಷ್ಠಾನದ ಪ್ರಗತಿಯ ವರದಿಯೊಂದಿಗೆ ಜನರ ಮುಂದೆ ಹೋಗಲಾಗುವುದು.2023ರಲ್ಲಿಯೂ ಜನರು ನಮಗೆ ಆಶೀರ್ವದಿಸಲಿದ್ದಾರೆ ಮತ್ತು ನಾವೇ ಅಧಿಕಾರಕ್ಕೆ ಬಂದು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತುಕೊಳ್ಳಲಿದ್ದೇವೆ ಎಂಬ ಅದಮ್ಯ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 3ಸಾವಿರ ಕೋಟಿ ರೂ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಸರಕಾರ 3ಸಾವಿರ ಕೋಟಿ ರೂ.ಗಳ ಅನುದಾನ ನೀಡುವುದರ ಮೂಲಕ ಈ ಪ್ರದೇಶದ ಮೇಲಿನ ಬದ್ಧತೆ ಪ್ರದರ್ಶಿಸಿದೆ ಎಂದು ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ತಿಂಗಳೊಳಗೆ 3ಸಾವಿರ ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಮತ್ತು ವರ್ಷಾಂತ್ಯಕ್ಕೆ ಖರ್ಚು ಮಾಡಲಾಗುವುದು ಎಂದರು.
ಈ ಹಿಂದಿನ ಸರಕಾರ 1500 ಕೋಟಿ ರೂ. ನೀಡುತ್ತಿತ್ತು;ಅದು ಕೂಡ ಖರ್ಚಾಗುತ್ತಿರಲಿಲ್ಲ. ಅದೆಲ್ಲದಕ್ಕೂ ನಮ್ಮ ಸರಕಾರ ಇತಿಶ್ರೀ ಹಾಡಿದೆ ಎಂದರು.
ಚಿಗಟೇರಿ ಸೇರಿದಂತೆ ಹರಪನಹಳ್ಳಿ ತಾಲೂಕಿನ 107 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದು, ನಾನೇ ಬಂದು ಭೂಮಿಪೂಜೆ ನೆರವೇರಿಸುವೆ ಎಂದರು.
ಕರುಣಾಕರ ರೆಡ್ಡಿ ಅವರದ್ದು ವಿಶಿಷ್ಟ ವ್ಯಕ್ತಿತ್ವ
ಹರಪನಹಳ್ಳಿ ಶಾಸಕ ಕರುಣಾಕರರೆಡ್ಡಿ ಅವರದ್ದು ಅತ್ಯಂತ ವಿಶಿಷ್ಟ ವ್ಯಕ್ತಿತ್ವ. ಎಂತ ಸವಾಲುಗಳು ಸಮಸ್ಯೆಗಳೇ ಎದುರಾದರೂ ಸಂಯಮ ಕಳೆದುಕೊಳ್ಳದೇ ಸ್ಥಿತಪ್ರಜ್ಞರಾಗಿ ಶಾಂತರೀತಿಯಿಂದ ಸಮಸ್ಯೆಗಳನ್ನು ಬಗೆಹರಿಸುವಂತ ವ್ಯಕ್ತಿತ್ವ ಎಂದರು.
ಬಳ್ಳಾರಿ ಜಿಲ್ಲೆಯ ಇತಿಹಾಸವನ್ನು ಮೆಲುಕುಹಾಕಿ ನೋಡಿದರೇ ಕೆಲವೇ ಕೆಲವು ಶಕ್ತಿಗಳ ಕೈಯಲ್ಲಿದ್ದ ಬಳ್ಳಾರಿ ಪ್ರಾಂತ್ಯದಲ್ಲಿನ ಶಕ್ತಿಗಳ ವಿರುದ್ಧ ಧ್ವನಿ ಎತ್ತಿ ನಮ್ಮಪಕ್ಷ ಭದ್ರವಾಗಿ ನೆಲೆಯೂರಿಸಿದ ಕೀರ್ತಿ ಜನಾರ್ಧನ ರೆಡ್ಡಿ,ಕರುಣಾಕರರೆಡ್ಡಿ, ಬಿ.ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಅವರಿಗೆ ಸಲ್ಲುತ್ತದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್ 15 ರಿಂದ ಪಡೆದುಕೊಂಡು ಮೇ 04 ರೊಳಗೆ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಕನಿಷ್ಠ ಶೇ. 60ರಷ್ಟು ಅಂಕಗಳನ್ನು ಪಡೆದಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ. 2.50 ಲಕ್ಷಗಳ ಮಿತಿಯೊಳಗಿರಬೇಕು. ಅರ್ಹತಾ ಪರೀಕ್ಷೆ ಮತ್ತು ಮೇ 19ರಂದು ನಡೆಯುವ ಕೌನ್ಸಿಲಿಂಗ್ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಆಸಕ್ತರು ದಾವಣಗೆರೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದಾವಣಗೆರೆ, ಚನ್ನಗಿರಿ, ಜಗಳೂರು ತಾಲ್ಲೂಕುಗಳ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08192-263546 ಅಥವಾ ಇ-ಮೇಲ್ dtwodvg@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ ಭೇಟಿ ನೀಡಿ ಅಲ್ಲಿ ಅಗ್ನಿಪಥ್ ಟ್ಯಾಬ್ ಕ್ಲಿಕ್ ಮಾಡಿ, ಆಧಾರ್ ಅಥವಾ 10ನೇ ತರಗತಿ ಸರ್ಟಿಫಿಕೇಟ್ ಬಳಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ಅಂಕಣ5 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ6 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ5 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂತರಂಗ2 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ2 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ6 hours agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ1 day agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

