ದಿನದ ಸುದ್ದಿ
ಪ್ರಾಣ ತೆಗೆದ ಬುಲೆಟ್ ..!
ಸುದ್ದಿದಿನ, ಮಂಡ್ಯ: ಬುಲೆಟ್‌ನಿಂದ ಬಿದ್ದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಳೇಬೂದನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬುಧವಾರ ಸಂಜೆ ಜರುಗಿದೆ.
ಮೃತನನ್ನು ತಾಲೂಕಿನ ಶಿವಾರ ಗ್ರಾಮದ ಪ್ರದೀಪ್ ಎಂದು ಗುರುತಿಸಲಾಗಿದೆ. ಶಿವು ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯದಿಂದ ಮದ್ದೂರು ಕಡೆ ತೆರಳುತ್ತಿದ್ದ ಬೈಕ್ ಶ್ರೀ ಸಾಯಿ ಹೋಟೆಲ್ ಬಳಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರದೀಪ್ ಎದುರು ರಸ್ತೆಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಅಪರಿಚಿತ ವಾಹನ ಪ್ರದೀಪ್ ತಲೆ ಮೇಲೆ ಹರಿದು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಮೃತ ದೇಹವನ್ನು ಮಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401