Connect with us

ದಿನದ ಸುದ್ದಿ

ಶಾಕಿಂಗ್ ನ್ಯೂಸ್; ಇಲ್ಲಿ ಬುರ್ಖಾ ಪದ್ಧತಿ ನಿಷೇಧವಂತೆ

Published

on

ಸುದ್ದಿದಿನ ದೆಹಲಿ: ಮುಸ್ಲಿಂ ಸಾಂಪ್ರದಾಯಿಕ ಪದ್ಧತಿಯಾದ ಬುರ್ಖಾ ಧರಿಸುವುದು ನಡೆದುಕೊಂಡು ಬರಲಾಗುತ್ತಿದೆ. ಆದರೆ, ಇಲ್ಲೊಂದು ಸ್ಥಳದಲ್ಲಿ ಬುರ್ಖಾ ನಿಷೇಧ ಮಾಡಲಾಗಿದೆ. ಇದು ಮುಸ್ಲಿಮರಿಗೆ ಬೇಸರ ಉಂಟುಮಾಡಿದೆ.

ಜಿನೇವಾ ಸ್ವಿಸ್‌ನ ಸೇಂಟ್ ಗ್ಯಾಲನ್ ನಲ್ಲಿ ಬುರ್ಖಾ ಮೇಲೆ ನಿಷೇಧ ಹೇರಲು ನಿರ್ಧರಿಸಲಾಗಿದೆ. ಈ ಕುರಿತು ಕೈಗೊಂಡ ಸಮೀಕ್ಷೆಯಲ್ಲಿ ಶೇ.67ರಷ್ಟು ಜನರು ಬುರ್ಖಾ ನಿಷೇಧಿಸುವಂತೆ ಮತ ಚಲಾಯಿಸಿದ್ದರು. ಇದರಿಂದಾಗಿ ಸ್ವಿಸ್ ನಲ್ಲಿ ಎರಡನೇ ಪ್ರಾಂತ್ಯದಲ್ಲಿ ಬುರ್ಖಾ ಮೇಲೆ ನಿಷೇಧ ಹೇರಿದಂತಾಗಿದೆ. ಈಶಾನ್ಯದ ಪ್ರಾಂತ್ಯವಾಗಿರುವ ಸೇಂಟ್ ಗ್ಯಾಲನ್ ನಲ್ಲಿ ಶೇ.67ರಷ್ಟು ಮತದಾರರು ಬುರ್ಖಾ ನಿಷೇಧದ ಪರವಾಗಿ ಮತ ಹಾಕಿದ್ದಾರೆ.

ದಕ್ಷಿಣ ಪ್ರಾಂತ್ಯವಾದ ಟಿಸಿನೊ ಸಹ ಇದೇ ನಿರ್ಧಾರ ತೆಗೆದುಕೊಂಡರು, ಎರಡು ವರ್ಷಗಳ ಹಿಂದೆ ಕಾನೂನು ಜಾರಿಗೆ ತಂದಿತ್ತು. ಇತರೆ ಮೂರು ಪ್ರಾಂತ್ಯಗಳಾದ ಜ್ಯೂರಿಚ್, ಸೊಲೊತರ್ನ್ ಹಾಗೂ ಗ್ಲೇರಸ್ ಗಳು ಈ ರೀತಿಯ ನಿಷೇಧವನ್ನು ತಿರಸ್ಕರಿಸಿದ್ದವು.

ದಿನದ ಸುದ್ದಿ

ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

Published

on

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending