Connect with us

ದಿನದ ಸುದ್ದಿ

ಪಳವಳ್ಳಿ ಬಳಿ ಬಸ್ ದುರಂತ ; ತಪ್ಪಿತಸ್ಥರ ವಿರುದ್ಧ ಕ್ರಮ: ಸಾರಿಗೆ ಸಚಿವ ಶ್ರೀರಾಮುಲು

Published

on

ಸುದ್ದಿದಿನ,ಬಳ್ಳಾರಿ : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕೆರೆಕಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಖಾಸಗಿ ಬಸ್ ದುರಂತ ದುರದೃಷ್ಟಕರ. ಘಟನಾ ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು.

ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಳ್ಳಾರಿಯ ಗೃಹಕಚೇರಿಯಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಘಟನೆಯಲ್ಲಿ ಸುಮಾರು 8 ಜನರ ಸಾವಿಗೀಡಾಗಿದ್ದು, 25 ಜನರಿಗೆ ಗಾಯವಾಗಿದೆ ಎಂದು ಹೇಳಿದರು. ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಭೇಟಿ ನೀಡಲು ತಿಳಿಸಲಾಗಿದ್ದು, ಬಸ್‍ಗೆ ಪರ್ಮಿಟ್ ಸರಿಯಾಗಿದೆಯೇ..?,ಫಿಟ್ನೇಸ್ ಪ್ರಮಾಣಪತ್ರ, ಇನ್ಸೂರೆನ್ಸ್ ಇದೆಯೋ, ದುರಂತಕ್ಕೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡಲು ತಿಳಿಸಲಾಗಿದ್ದು,ಪ್ರಾಥಮಿಕ ವರದಿ ಅನುಸಾರ ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದರು.

ಅಪಘಾತಕ್ಕೀಡಾದ ಬಸ್

ಬಸ್‍ನಲ್ಲಿ ಜನರನು ಓವರ್ ಲೋಡ್ ಆಗಿ ತುಂಬಿಕೊಂಡಿರುವುದು ಮತ್ತು ಅತಿವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿರುವುದು ಈ ದುರಂತಕ್ಕೆ ಕಾರಣ ಎಂಬ ಮಾಹಿತಿ ತಿಳಿದುಬಂದಿದೆ ಎಂದರು.
ಈ ಭಾಗದಲ್ಲಿ ಸರಕಾರಿ ಬಸ್‍ಗಳು ಓಡಾಡ್ತಾ ಇಲ್ಲ;ಖಾಸಗಿ ಬಸ್‍ಗಳು ಓಡಾಡ್ತಾ ಇವೆ.

ಈ ಕುರಿತು ಬಸ್ ಡಿಪೋ ವ್ಯವಸ್ಥಾಪಕರಿಗೆ ಆ ಭಾಗದ ಜನರು ಮನವಿ ಮಾಡಿದ್ರೂ ಅವರು ಬಸ್‍ಗಳು ಓಡಿಸದಿರುವುದು ಗಮನಕ್ಕೆ ಬಂದಿದು;ಈ ದುರಂತಗಳಿಗೆ ಕಾರಣ ಎಂದು ತಿಳಿಸಿದ ಅವರು ಈ ಭಾಗದ ಖಾಸಗಿ ಬಸ್‍ಗಳ ಪರ್ಮಿಟ್ ರದ್ದುಪಡಿಸಿ ಕೆಎಸ್‍ಆರ್‍ಟಿಸಿ ಬಸ್‍ಗಳ ಸಂಚಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.

ಮೃತರು ಮತ್ತು ಗಾಯಾಳುಗಳಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಜೆ.ಶಾಂತಾ,ಮಾಜಿ ಶಾಸಕ ಸುರೇಶಬಾಬು,ಬುಡಾ ಅದ್ಯಕ್ಷ ಪಾಲನ್ನ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending