ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್‍ಪಾಸ್ : ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು. ಸೇವಾಸಿಂಧು https://sevasindhuservices.karnataka.gov.in/buspassservices ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರದಲ್ಲಿಯೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/-ಗಳನ್ನು ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.
ಪಾಸ್ ವಿತರಣಾ ಕೌಂಟರ್‍ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.in ದಲ್ಲಿ ಪಡೆಯಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243