ದಿನದ ಸುದ್ದಿ
ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್‌ಪಾಸ್ ಅವಧಿ ಜೂನ್ 30ರವರೆಗೆ ವಿಸ್ತರಣೆ
ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಇಂದಿನಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್‌ಪಾಸ್‌ನ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿವೆ.
ಈ ಕುರಿತು ಪ್ರಕಟಣೆ ನೀಡಿರುವ ರಸ್ತೆ ಸಾರಿಗೆ ಸಂಸ್ಥೆಗಳು, ಇಂದಿನಿಂದ ಪ್ರಸಕ್ತ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಿ, ಬಸ್‌ಪಾಸ್ ಪಡೆಯಲು ಅವಕಾಶ ಕೂಡ ಕಲ್ಪಿಸಲಾಗಿದೆ.
ಈ ನಡುವೆ, ಅವರ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ, ಕಳೆದ ಸಾಲಿನಲ್ಲಿ ಪಡೆದಂತಹ ವಿದ್ಯಾರ್ಥಿ ಬಸ್ ಪಾಸ್ ಬಳಸಿ, ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಂಚರಿಸಲು ಅನುಮತಿಸಲಾದೆ.
ಈ ಹಿಂದೆ ನೀಡಿರುವಂತ ಬಸ್‌ಪಾಸ್ ಮಾನ್ಯತೆ ಜೂನ್ 30ರವರೆಗೆ ಇರುವುದರಿಂದ, ಇದೇ ಪಾಸುಗಳನ್ನು ಬಳಸಿ ಕೆಎಸ್‌ಆರ್‌ಟಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243