ದಿನದ ಸುದ್ದಿ
ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯ : ಸಚಿವ ಡಿ.ಸಿ.ತಮ್ಮಣ್ಣ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
&description=ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯ : ಸಚಿವ ಡಿ.ಸಿ.ತಮ್ಮಣ್ಣ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
&description=ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯ : ಸಚಿವ ಡಿ.ಸಿ.ತಮ್ಮಣ್ಣ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ, ಬೆಂಗಳೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಉಂಟಾಗಿದೆ. “ಬಸ್ ಟಿಕೆಟ್ ದರ ಹೆಚ್ಚಳ ಮಾಡೋದು ಅನಿವಾರ್ಯವಾಗಿದ್ದು, ಕಾರಣ ದಿನೇ ದಿನೇ ಡಿಸೇಲ್ ಬೆಲೆ ಏರಿಕೆ ಆಗಿರುವುದು.
ಆದ್ದರಿಂದ ಟಿಕೆಟ್ ಹೆಚ್ಚಳ ಮಾಡದೇ ವಿಧಿಯೇ ಇಲ್ಲ. 18% ಹೆಚ್ಚಳ ಮಾಡುವ ಪ್ರಸ್ತಾವನೆ ಈಗಾಗಲೇ ಸಲ್ಲಿಸಲಾಗಿದೆ. ಈ ವಾರದಲ್ಲಿ ಸಿಎಂ ಜೊತೆ ಅಂತಿಮ ನಿರ್ಧಾರ ಮಾಡಿ ಟಿಕೆಟ್ ಏರಿಕೆ ಮಾಡಲಾಗುವುದು” ಎಂದು ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.
ಗಣೇಶ ಹಬ್ಬಕ್ಕೆ ಬಸ್ ದರ ಹೆಚ್ಚಳವಿಲ್ಲ
ಗಣೇಶ ಹಬ್ಬಕ್ಕೆ ಬಸ್ ದರ ಹೆಚ್ಚಳವಿಲ್ಲ. ಸರ್ಕಾರಿ ಬಸ್ ದರ ಹೆಚ್ಚಳ ಮಾಡೋದಿಲ್ಲ. ಆದರೆ ಖಾಸಗಿ ಅವ್ರು ಹೆಚ್ಚಳ ಮಾಡ್ತಾರೆ. ಹೀಗಾಗಿ ನಮ್ಮ ಅಧಿಕಾರಿಗಳಿಗ ಹೆಚ್ಚು ಬಸ್ ಸೇವೆ ಒದಗಿಸಿ ಅಂತ ಸೂಚನೆ ನೀಡಿದ್ದೇನೆ. ಅಗತ್ಯ ಇರುವ ಜಿಲ್ಲೆಗಳಿಗೆ ಸರ್ಕಾರದಿಂದಲೇ ಹೆಚ್ಚು ಬಸ್ ಸೇವೆ ಒದಗಿಸುತ್ತೇವೆ. ಈ ಮೂಲಕ ಖಾಸಗಿ ಅವರಿಗೆ ಕಡಿವಾಣ ಹಾಕಲಾಗುತ್ತದೆ ಎಂದು ತಿಳಿಸಿ್ರರು.
ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ
ಖಾಸಗಿ ಬಸ್ ಗಳ ಮಾಲೀಕರ ಜೊತೆ ಸಾರಿಗೆ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಮಾಹಿತಿಗಳು ಬಂದಿವೆ. ಇದನ್ನೂ ಹಂತ ಹಂತವಾಗಿ ಕಡಿವಾಣ ಹಾಕುತ್ತೇವೆ. ಅಧಿಕಾರಿಗಳು ಮತ್ತು ಖಾಸಗಿ ಬಸ್ ಗಳ ಮಾಲೀಕರ ನಡುವೆ ಇದು ತುಂಬಾ ವರ್ಷಗಳಿಂದ ನಡೆದುಕೊಂಡು ಬಂದಿದೆ. ಇದನ್ನ ತಕ್ಷಣ ಸರಿ ಮಾಡುತ್ತೇವೆ ಅನ್ನೋದು ಕಷ್ಟ. ಹಂತ ಹಂತವಾಗಿ ಕಡಿವಾಣ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಉಚಿತ ಬಸ್ ಪಾಸ್ ಇಲ್ಲ
ಈ ವರ್ಷ ಉಚಿತ ಬಸ್ ಪಾಸ್ ಇರುವುದಿಲ್ಲ.
ಈಗಾಗಲೇ ಪಾಸ್ ತೆಗೆದುಕೊಂಡವರಿಗೂ ಕೂಡ ಉಚಿತ ಬಸ್ ಪಾಸ್ ಸಿಗುವುದಿಲ್ಲ.ಇನ್ನೂ ಬಸ್ ಪಾಸ್ ತೆಗೆದುಕೊಳ್ಳದವರಿಗೆ ಉಚಿತ ಬಸ್ ಪಾಸ್ ಸಿಗಬಹುದು.ಅತೀ ಶೀಘ್ರದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.
ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.
ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ5 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ2 days agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ22 hours agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ3 hours agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
-
ದಿನದ ಸುದ್ದಿ22 hours agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

