ದಿನದ ಸುದ್ದಿ

ಸಧ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಅಂಕಿ ಅಂಶಗಳ ಸಮೇತ ವಿವರಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಹಾಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ ಎಂದು ಹೇಳಿದರು.

GST ಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ ಎಂದು ದೂರಿದರು. ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ ಎಂದು ಸಮರ್ಥಿಸಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version