ದಿನದ ಸುದ್ದಿ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

Published

on

ಸುದ್ದಿದಿನಡೆಸ್ಕ್:ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದಾರೆ.

ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಈ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿದ್ದರೆ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ತೆರವಾಗಿದೆ. ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version