ದಿನದ ಸುದ್ದಿ
ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ವಜಾಗೊಳಿಸಲು ಮನವಿ
ಸುದ್ದಿದಿನ, ಬೆಂಗಳೂರು : ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಪ್ರತ್ಯೇಕ ದೂರು ಸಲ್ಲಿಸಿದ್ದು, ನಾಮಪತ್ರ ವಜಾಗೊಳಿಸುವಂತೆ ಮನವಿಯನ್ನು ಮಾಡಿವೆ.
ಈ ದೂರಿನಲ್ಲಿ ಮುನಿರತ್ನ ಅವರು ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯ ಬಗ್ಗೆ ಉಲ್ಲೇಖಿಸಿಲ್ಲ. ಈ ಹಿನ್ನೆಲೆಯಲ್ಲಿ ಮುನಿರತ್ನ ನಾಮಪತ್ರ ತಿರಸ್ಕರಿಸುವಂತೆ ಆಗ್ರಹಿಸಿವೆ. ಮುನಿರತ್ನ ಅವರು ಈ ಹಿಂದೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆ ಆರ್ ಆರ್ ನಗರ ಕ್ಷೇತ್ರ ಸ್ಥಾನ ತೆರವಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243