ರಾಜಕೀಯ

ಶಿವಮೊಗ್ಗ ಉಪ ಚುನಾವಣೆಗೆ ಬಿ.ವೈ.ರಾಘವೇಂದ್ರ ‘ಕಮಲ’ ಅಭ್ಯರ್ಥಿ: ಬಿಎಸ್ ವೈ ಘೋಷಣೆ

Published

on

ಸುದ್ದಿದಿನ ಡೆಸ್ಕ್ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಾರವಳ್ಳಿ ಗ್ರಾಮದಲ್ಲಿ ಮಾತನಾಡಿದ್ದು, ಈ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನನ್ನ ಮಗ ಬಿ.ವೈ.ರಾಘವೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಈ ವೇಳೆ ಪುತ್ರನನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಉಪ ಚುನಾವಣೆಯು ನ.3ರಂದು ನಡೆಯಲಿದ್ದು, ನ.6ರಂದು ಫಲಿತಾಂಶ ಹೊರಬೀಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version