Connect with us

ದಿನದ ಸುದ್ದಿ

CAA ಗೆ ಮುಸ್ಲಿಂ ಬಣ್ಣ ಯಾಕೆ..?

Published

on

 

CAA : Citizenship Amendment Act
Provided that any person belonging to Hindu , Sikh , Buddhist , Jain , Parsi and Christian community from Afghanistan , Bangladesh or Pakistan who entered into India on or before 31at December 2014 and who has been exempted by the central govt by or under clause (c) of sub section (2) of section 3 of the Passport (entry into India) Act 1920 or from the application of the provisions of the Foriegners Act 1946 or any rule or order made thereunder , shall not be treated as illegal migrants for the purpose of this Act.

ಸಿಎಎ: ಪೌರತ್ವ ತಿದ್ದುಪಡಿ ಕಾಯ್ದೆ

ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಯಾವುದೇ ವ್ಯಕ್ತಿ 2014 ರ ಡಿಸೆಂಬರ್ 31 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದ ಮತ್ತು ಷರತ್ತು (ಸಿ) ಯ ಮೂಲಕ ಅಥವಾ ಕೇಂದ್ರ ಸರ್ಕಾರದಿಂದ ವಿನಾಯಿತಿ ಪಡೆದವರು. ಪಾಸ್‌ಪೋರ್ಟ್ ಕಾಯ್ದೆ 1920ರ ನಿಯಮ (c) ಉಪ ನಿಯಮ(2) ರ ಪ್ರಕಾರ ಕೇಂದ್ರ ಸರ್ಕಾರದ ವಿನಾಯಿತಿ ಪಡೆದವರು ಅಥವಾ ವಿದೇಶಿಗರ ಕಾಯ್ದೆ 1946 ಅಥವಾ ಇತರೆ ಯಾವುದೇ ಕಾನೂನು ಅಥವಾ ನಿಯಮಾವಳಿಗಳ ಪ್ರಕಾರ ಅಕ್ರಮ ವಲಸಿಗರು ಎಂದು ಪರಿಣಗಣಿಸಲಾಗುವುದಿಲ್ಲ ಎಂಬುದು ಈ ಕಾಯ್ದೆ.

ಸರಳವಾಗಿ

ಅಕ್ರಮವನ್ನು ಸಕ್ರಮ ಮಾಡುವ ಖಾಯ್ದೆ, ಇವರುಗಳು ಅಂದ್ರೆ ಅಕ್ರಮ ವಲಸಿಗರು ದೇಶದ ಒಳಗೆ ಹೇಗೆ ಬಂದ್ರು ಅಂತ ಪ್ರಶ್ನೆ ಮಾಡದೇ ಬಂದವರಿಗೆಲ್ಲ (ಮುಸ್ಲಿಮರನ್ನು ಹೊರತು ಪಡಿಸಿ) ಪೌರತ್ವ ಕೊಟ್ಟು ಇಲ್ಲಿನ ಪ್ರಜೆಗಳು ಅಂತ ಅಧಿಕೃತವಾಗಿ ಸೀಲ್ ಹೊಡೆಯೋದು.

ಪ್ರಶ್ನೆಗಳು

  1. ಎಲ್ಲಿಂದಲೋ ಬಂದ ಅಕ್ರಮ ವಲಸಿಗರಿಗೆ ಯಾವ ಆಧಾರದ ಮೇಲೆ ಪೌರತ್ವ ಕೊಡ್ತೀರಿ?
  2. ಅವರು ದೇಶದ ಗಡಿ ದಾಟಿ ಒಳಗೆ ಪ್ರವೇಶಿಸಲು ಸಾಧ್ಯವಾಗಿದ್ದು ಹೇಗೆ? ಇದರ ವಿಚಾರಣೆ ಕೈಬಿಟ್ಟರೆ ನುಸುಳುಕೋರರಿಗೆ ನೆರವಾದವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ.
  3. ಅವರಿಗೆ ಇರೋದಕ್ಕೆ ಜಾಗ ಎಲ್ಲಿ ಮಾಡಿ ಕೊಡ್ತೀರಿ?
  4. ಉದ್ಯೋಗ , ಆಹಾರ , ಮೀಸಲಾತಿ , ಸರ್ಕಾರಿ ಸೌಲಭ್ಯಗಳು ಎಲ್ಲವನ್ನೂ ನಾವುಗಳು ಅವರುಗಳ ಜೊತೆ ಹಂಚಿಕೊಳ್ಳಬೇಕು (ಮೂಲ ನಿವಾಸಿಗಳಿಗೆ ಸರಿಯಾಗಿ ತಲುಪದ ಇವುಗಳನ್ನ ಎಲ್ಲಿಂದಲೋ ಬಂದ ವಲಸಿಗರ ಜೊತೆ ಹೇಗೆ ಹಂಚಿಕೊಳ್ಳೋದು?
  5. ಎಲ್ಲ ವಲಸಿಗರನ್ನು ಸರಿಯಾದ ಆಧಾರವಿಲ್ಲದೆ ಅವರಿಗೆ ಪೌರತ್ವ ಕೊಟ್ಟು ಒಳಗೆ ಬಿಟ್ಟುಕೊಂಡರೆ ಆಂತರಿಕ ಭದ್ರತೆಗೆ ಚ್ಯುತಿ ಬರುವುದಿಲ್ಲವೇ?
  6. ರಾಜ್ಯಗಳ ಲೆಕ್ಕಾಚಾರದಲ್ಲಿ ನನ್ನ ರಾಜ್ಯ ಅಂದರೆ ಕರ್ನಾಟಕದಲ್ಲಿ ಈಗಾಗಲೇ ಪರ ಭಾಷಿಕರ ನೆರೆ ರಾಜ್ಯದವರ ವಲಸೆಯಿಂದ ಇಲ್ಲಿನ ಕನ್ನಡಿಗರು ಉದ್ಯೋಗದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ , ನೆರೆ ರಾಜ್ಯದ ವಲಸೆಯನ್ನು ಸಹಿಸದ ನಾವು ನೆರೆ ದೇಶದ ವಲಸಿಗರನ್ನು ಸಹಿಸುವುದಾದರು ಹೇಗೆ ?
  7. ಇದಿಷ್ಟು ನಮ್ಮ CAA ಹೋರಾಟಕ್ಕೆ ನಾವು ಬಳಸಬೇಕಿರುವ ನಿಜವಾದ ಕಾರಣಗಳು ಆದರೆ ವಾಸ್ತವದಲ್ಲಿ ಸದ್ಯಕ್ಕೆ ನಡೆಯುತ್ತಿರುವ ಹೋರಾಟ ಮುಸ್ಲಿಂ ಸಮುದಾಯವನ್ನು ಮುಂದಿಟ್ಟುಕೊಂಡು. ಅಕ್ರಮ ವಲಸಿಗರನ್ನು ಸಕ್ರಮ ಮಾಡೋದು ದೇಶದ ಇಂದಿನ ಆರ್ಥಿಕ ಪರಿಸ್ಥಿತಿಯಲ್ಲಿ ಸರಿ ಅಲ್ಲ , ದೇಶದ ಎಲ್ಲ ಸಮುದಾಯ ಧರ್ಮ ಒಟ್ಟಾರೆಯಾಗಿ ಭಾರತೀಯ ಮೂಲನಿವಾಸಿ ಪ್ರಜೆಗಳು ಹೋರಾಡಬೇಕಿದೆ, ಆದರೆ ಈ ಹೋರಾಟಕ್ಕೆ “ಮುಸ್ಲಿಂ” ಅಂತ ನೇಮ್ ಬೋರ್ಡ್ ಹಾಕಿ ದಾರಿ ತಪ್ಪಿಸಿದ್ದು ಯಾರು ??
  8. ಕೇವಲ ಮುಸ್ಲಿಂ ಸಮುದಾಯವನ್ನು ಮುಂದಿಟ್ಟುಕೊಂಡು ಮಾಡುತ್ತಿರುವ ಹೋರಾಟದ ಹಿಂದಿನ ಉದ್ದೇಶ ಏನು ಹಾಗಾದ್ರೆ ?

ಬಿಂದು ಗೌಡ
ಕೆಪಿಸಿಸಿ ಸಾಮಾಜಿಕ ಜಾಲತಾಣ
ರಾಜ್ಯ ಕಾರ್ಯದರ್ಶಿ

ಸುದ್ದಿದಿನ‌.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending