ದಿನದ ಸುದ್ದಿ

CAB ವಿರುದ್ಧ ಪ್ರತಿಭಟನೆ | ಸರ್ವಾಧಿಕಾರಿ ಧೋರಣೆಯ ಮೋದಿ ಸರ್ಕಾರ ನಡೆ ಖಂಡ‌ನೀಯ : ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು : ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ ಸಮೂಹ ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ವಾಧಿಕಾರಿ ಧಿಮಾಕಿನಿಂದ ಹತ್ತಿಕ್ಕಲು ಹೊರಟಿರುವ ನರೇಂದ್ರ ಮೋದಿ ಸರ್ಕಾರದ ನಡೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

https://m.facebook.com/story.php?story_fbid=1397384947090690&id=100004575947875

ಕಳೆದ ರಾತ್ರಿ ದೆಹಲಿಯಲ್ಲಿ ‘ಬೇಲಿಯೇ ಎದ್ದು ಹೊಲಮೇದಂತೆ’ ಪೊಲೀಸರೇ ಕ್ಯಾಂಪಸ್‌ಗೆ ನುಗ್ಗಿ ನಡೆಸಿರುವ ದಾಂಧಲೆ ಮತ್ತು ವಿದ್ಯಾರ್ಥಿಗಳ ಮೇಲೆ‌ ನಡೆದಿರುವ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು‌ ಎಂದು ಟ್ವೀಟ್ ಮೂಲಕ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version