Connect with us

ದಿನದ ಸುದ್ದಿ

ಕಾಜಲ್ ಅಗರವಾಲ್ಗೆ ಕಿಸ್ ಕೊಟ್ಟ ಕ್ಯಾಮೆರಾ ಮೆನ್; ಎಲ್ರು ಒಂದಕ್ಷಣ ಶಾಕ್!

Published

on

ಸುದ್ದಿದಿನ ಬೆಂಗಳೂರು: ವಂಶಧಾರ ಬ್ಯಾನರ್ ಅಡಿ ನಿರ್ಮಾಣವಾಗುತ್ತಿರುವ ತೆಲುಗು ಸಿನಿಮಾ ‘ಕವಚಂ’ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿ ಕಾಜಲ್ ಅಗರ್ ವಾಲ್ ಗೆ ಇದ್ದಕ್ಕಿದ್ದಂತೆ ಕಿಸ್ ಕೊಟ್ಟ ಸೀನ್ ಸಾಮಾಜಿಕ ಜಾಲತಾಣದಲ್ಲಿ ಸಕತ್ ಟ್ರೋಲ್ ಆಗಿದೆ. ಇದರಿಂದ ಸಾರ್ವಜನಿಕ ಸಮಾರಂಭದಲ್ಲೇ ಮುಜುಗರಕ್ಕೆ ಒಳಗಾಗ ಬೇಕಾಯಿತು.

ಇಲ್ಲಿದೆ ನೋಡಿ ವಿಡಿಯೋ: 

ಕವಚಂ ಸಿನಿಮಾ ತಂಡದ ಪರಿಚಯ ಮಾಡಿ ಕೊಡುತ್ತಿದ್ದ ವೇಳೆ ಟಾಲಿವುಡ್ ಬೆಡಗಿ ಕಜಲ್,ಗೆ ಕ್ಯಾಮರಾ ಮ್ಯಾನ್ ಚೋಟಾ ಕಿಸ್ ನೀಡುವ ಮೂಲಕ ಸಪ್ರೈಸ್ ಗಿಫ್ಟ್ ಕೊಟ್ಟಿದ್ದಾರೆ. ದಿಢೀರನೇ ವೇದಿಕೆ ಮೇಲಿದ್ದ ಎಲ್ಲರೂ ಶಾಕ್ ಆದರು. ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೇ ಕಾಜಲ್ ನಕ್ಕು, ಚೋಟಾ ಅವರ ನನ್ನ ಕುಟುಂಬದಲ್ಲಿ ಒಬ್ಬ ಸದಸ್ಯರಿದ್ದಂತೆ ಎಂದು ಹೇಳಿ ಮಾತು ಮುಂದುವರಿಸಿದರು. ನಾನು ಅವರೊಂದಿಗೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending