ದಿನದ ಸುದ್ದಿ

ಫೆ.28 ರಂದು ಟಣಕನಕಲ್‌ನ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಕೊಪ್ಪಳ : ಬೆಂಗಳೂರಿನ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಐಟಿಐ ಪಾಸಾದ ಅಥವಾ ಫಲಿತಾಂಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕೊಪ್ಪಳದ ಟಣಕನಕಲ್‌ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆ.28 ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಶಿಶಿಕ್ಷು (Apprenticeship) ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ.

ಐಟಿಐ, ಎಲೆಕ್ಟ್ರಿಷಿಯನ್, ಫಿಟ್ಟರ್, ಟರ್ನರ್, ಮೆಕಾನಿಕ್ ಮೋಟಾರ್ ವೆಹಿಕಲ್, ಮೆಕ್ಯಾನಿಕ್ ಡೀಸಲ್, ಟೂಲ್ ಅಂಡ್ ಡೈ ಮೇಕಿಂಗ್, ವೆಲ್ಡರ್ ಈ ವೃತ್ತಿಗಳಿಗೆ ಸಂಬಂಧಿಸಿದ ವಿದ್ಯಾರ್ಥಿಗಳು ಸಹ ಸಂದರ್ಶನಕ್ಕೆ ಹಾಜರಾಗಬಹುದು.

ಆಸಕ್ತ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್, ಫೋಟೋ, ವಿರ್ದ್ಯಾಹತೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಎರಡು ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಟಣಕನಕಲ್‌ನ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಚಾರ್ಯರಾದ ಗವಿಶಂಕರ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version