ದಿನದ ಸುದ್ದಿ
ದ್ವಿತೀಯ ಪಿಯುಸಿ ಪರೀಕ್ಷೆ ರದ್ದು : ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆದೇಶ
ಸುದ್ದಿದಿನ, ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರದ್ದುಗೊಳಿಸಲಾಗಿದೆ.
2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ಹೊಸ ವಿದ್ಯಾರ್ಥಿಗಳ (Freshers)
ಫಲಿತಾಂಶವನ್ನು ಅವರು ಈ ಹಿಂದೆ ಪ್ರಥಮ ಪಿಯುಸಿ ಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಂಕಗಳನ್ನು ನೀಡಿ ಪ್ರಕಟಗೊಳಿಸಲು ತೀರ್ಮಾನಿಸಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಇಲಾಖೆಯು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸುತ್ತದೆ.
ಈ ರೀತಿ ನೀಡಿದ ಫಲಿತಾಂಶವು ಯಾವುದಾದರೂ ವಿದ್ಯಾರ್ಥಿಗೆ ತೃಪ್ತಿಯಾಗದಿದ್ದಲ್ಲಿ, ಕೋವಿಡ್ ಅಲೆ ನಿಯಂತ್ರಣಕ್ಕೆ ಬಂದ ನಂತರ ಇಲಾಖೆಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬಹುದು.
ಪ್ರಸ್ತುತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊ೦ಡ ಮನರಾವರ್ತಿತ (Repeaters) ವಿದ್ಯಾರ್ಥಿಗಳು ಹಾಗೂ ಖಾಸಗಿ (Private) ಅಭ್ಯರ್ಥಿಗಳ ಫಲಿತಾಂಶವನ್ನು ಮೇಲೆ ತಿಳಿಸಿದಂತೆ ಪ್ರಕಟಗೊಳಿಸಲು ಯಾವುದೇ ಸ್ಪಷ್ಟ ದಾಖಲೆಗಳು ಲಭ್ಯವಿಲ್ಲದ ಪ್ರಯುಕ್ತ ಇಲಾಖೆಯು ಮುಂದಿನ ದಿನಗಳಲ್ಲಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವುದು ಎಂದು ಇಲಾಖೆ ಪ್ರಕಟಣೆ ಯಲ್ಲಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243