ದಿನದ ಸುದ್ದಿ

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ವ್ಯಾಪ್ತಿಯ 06 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರಾಥಮಿಕ)-02 ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ)-10 ಹುದ್ದೆಗಳಿಗೆ ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಆರ್.ಸಿ.ಐ ನಿಯಮದಂತೆ ವಿಶೇಷ ಡಿ.ಇಡಿ ಮತ್ತು ವಿಶೇಷ ಬಿ.ಇಡಿ ಪದವಿಯ ವಿದ್ಯಾರ್ಹತೆ ಹೊಂದಿರುವವರನ್ನು 2021-22ನೇ ಸಾಲಿಗೆ ನೇರಗುತ್ತಿಗೆ ಮೂಲಕ ತಾತ್ಕಾಲಿಕ ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು ಮತ್ತು ಆರ್.ಸಿ.ಐ ನೊಂದಣಿ (2021-22 ಸಾಲಿಗೆ) ಪ್ರಮಾಣ ಪತ್ರದೊಂದಿಗೆ ಸ್ವವಿವರವುಳ್ಳ ಮಾಹಿತಿಯನ್ನು ಜೂ.24ರ ಸಂಜೆ 5 ಗಂಟೆಯೊಳಗೆ ಅಂಚೆ ಅಥವಾ ಮುದ್ದಾಂ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಮಗ್ರ ಶಿಕ್ಷಣ ಕರ್ನಾಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಅಂಬೇಡ್ಕರ್ ವೃತ್ತ ದಾವಣಗೆರೆ-577002 ಇಲ್ಲಿಗೆ ಸಲ್ಲಿಸಬೇಕು.

ಇದನ್ನೂ ಓದಿ : ಗುತ್ತಿಗೆ ಆಧಾರದಲ್ಲಿ ನರ್ಸ್, ಫಾರ್ಮಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9448999394, ದೂ.ಸಂ: 08192-296445 ಕ್ಕೆ ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version