ದಿನದ ಸುದ್ದಿ
ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ
ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.
ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.
ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243