Connect with us

ಲೈಫ್ ಸ್ಟೈಲ್

ಕ್ಯಾನ್ಸರ್ ನಿಯಂತ್ರಕ ‘ಏಲಕ್ಕಿ’ ಬಗ್ಗೆ ನೀವಿಷ್ಟು ತಿಳಿಯಲೇ ಬೇಕು..!

Published

on

ಸುದ್ದಿದಿನ ಡೆಸ್ಕ್ : ಎಲ್ಲಾ ಸಿಹಿ ಅಡುಗೆಯಲ್ಲಿ ಮತ್ತು ಕೆಲವು ಮಸಾಲೆ ಅಡುಗೆಯಲ್ಲಿ ಬಳಸಿ ಪರಿಮಳ ಹಾಗು ಸ್ವಾದವನ್ನು ಹೆಚ್ಚಿಸುವ ಏಲಕ್ಕಿಯ ಕೆಲವು ಉಪಯೋಗವನ್ನು ತಿಳಿಯೋಣ.

ಉಪಯೋಗಗಳು

  1. ನಿಂಬೆಹಣ್ಣಿನ ಪಾನಕಕ್ಕೆ ಏಲಕ್ಕಿ ಪುಡಿಯನ್ನು ಹಾಕಿ ಕುಡಿದರೆ ವಾಂತಿ ಮತ್ತು ತಲೆಸುತ್ತುವಿಕೆ ಸ್ಥಗಿತವಾಗುವುದು.
  2. ಜೀರಿಗೆ ಕಷಾಯಕ್ಕೆ ಏಲಕ್ಕಿ ಪುಡಿಯನ್ನು ಬೆರೆಸಿ ಸೇವಿಸುವುದರಿಂದ ಪಿತ್ತ ಸಂಕಟ ನಿವಾರಣೆಯಾಗುತ್ತದೆ.
  3. ಕೈ ಮದ್ದು ಹಾಕಬಹುದೆಂದು ಭಯವಿದ್ದಲ್ಲಿ ಊಟಕ್ಕೆ ಮುಂಚೆ ಏಲಕ್ಕಿ ಸೇವಿಸುವುದರಿಂದ ಕೈ ಮದ್ದಿನ ಪ್ರಭಾವ ಇರುವುದಿಲ್ಲ.
  4. ಪ್ರತಿದಿನ ಬಾಳೇಹಣ್ಣಿನೊಂದಿಗೆ ಒಂದು ಸಂಪೂರ್ಣ ಏಲಕ್ಕಿಯನ್ನು ತಿನ್ನುವುದರಿಂದ ಮೂಲವ್ಯಾಧಿ ಮತ್ತು ಮಲಬದ್ಧತೆ ದೂರವಾಗುವುದು.
  5. ಟೀಯೊಂದಿಗೆ ಏಲಕ್ಕಿ ಪುಡಿ ಮಿಶ್ರ ಮಾಡಿ ಸೇವಿಸುವುದರಿಂದ ಉರಿ ಮೂತ್ರ ಮತ್ತು ಆಮಂಶಕೆಯಿಂದ ಗುಣ ಕಾಣಬಹುದು.
  6. ಹಾಲಿಗೆ ಏಲಕ್ಕಿ ಪುಡಿಯನ್ನು ಹಾಕಿ ಕುದಿಸಿ ಅದಕ್ಕೆ ಮೂರು ಟೀ ಚಮಚ ಜೇನುತುಪ್ಪ ಸೇರಿಸಿಕೊಂಡು ಪ್ರತಿ ರಾತ್ರಿ ಸೇವಿಸುವುದರಿಂದ ಜ್ಞಾಪಕ ಶಕ್ತಿ ಹೆಚ್ಚಾಗುವುದು.
  7. ಏಲಕ್ಕಿ ಕಾಣುವ ಚೆನ್ನಾಗಿ ಅಗಿದು ನುಂಗುವುದರಿಂದ ಬಾಯಿ ಸುವಾಸನೆಯಿಂದ ಕೂಡಿರುತ್ತದೆ.
  8. ಬಾಯರಿದಾಗ ಏಲಕ್ಕಿ ತಿನ್ನದರೆ ಬಾಯರಿಕೆ ಕಡಿಮೆಯಾಗುತ್ತದೆ.
  9. ಪ್ರಯಾಣದ ಸಮಯದಲ್ಲಿ ಆಗುವ ಹೊಟ್ಟೆ ತೊಳಸುವಿಕೆ ಏಲಕ್ಕಿ ಸೇವಿಸುವುದರಿಂದ ಹೊಟ್ಟೆನೋವು ಆಗುವ ಸಂಕಟ ಕಡಿಮೆಯಾಗುತ್ತದೆ.
  10. ಅತೀ ರಕ್ತದೊತ್ತಡವನ್ನು ಕಡಿಮೆಗೊಳಿಸಲು ಏಲಕ್ಕಿ ಸಹಕಾರಿ
  11. ನೆಗಡಿ ಮತ್ತು ಕೆಮ್ಮನ್ನು ನಿವಾರಿಸುವ ಶಕ್ತಿ ಇದಕ್ಕಿದೆ.
  12. ಕ್ಯಾನ್ಸರ್ ಗುಣಪಡಿಸುವ ಶಕ್ತಿ ಏಲಕ್ಕಿಗಿದೆ.
  13. ರಾಸಾಯನಿಕ ಗುಣದಿಂದಾಗಿ ಶರೀರದಲ್ಲಿರುವ ಫ್ರೀ ರೆಡಿಕಲ್ ಮತ್ತು ಇತರ ವಿಷಯುಕ್ತ ಕಣಗಳು ದೂರವಾಗುತ್ತವೆ. ಇದರಿಂದ ರಕ್ತ ಶುದ್ಧವಾಗುತ್ತದೆ.
  14. ಹಾಲಿನಲ್ಲಿ ಏಲಕ್ಕಿ ಹಾಕಿ ಕುದಿಸಿ ಇದಕ್ಕೆ ಸ್ವಲ್ಪ ಜೇನು ಸೇರಿಸಿ. ಪ್ರತಿ ದಿನ ರಾತ್ರಿ ನಿಯಮಿತವಾಗಿ ಸೇವನೆ ಮಾಡಿದರೆ ಲೈಂಗಿಕ ಆಸಕ್ತಿ ಹೆಚ್ಚಾಗುತ್ತದೆ.

ಇದನ್ನೂ ಓದಿ

https://suddidina.com/daily-news/watermelon-benefits/

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಸುದ್ದಿದಿನ ಕನ್ನಡ ಬೆಳಗಿನ ಪ್ರಮುಖ ಸುದ್ದಿಗಳು

  1. ಇಂದು ಭಾರತದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಹಾರ್‌ಲಾಲ್ ನೆಹರು ಅವರ ಪುಣ್ಯತಿಥಿ. ಸ್ವಾತಂತ್ರ‍್ಯ ನಂತರ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸಿದ್ದ ಅವರು, 1964ರ ಮೇ 27 ರಂದು ನಿಧನರಾದರು. 16 ವರ್ಷಗಳ ಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದ್ದ ಅವರನ್ನು ಇಂದು ದೇಶ ಸ್ಮರಿಸುತ್ತಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ಪಂಡಿತ್ ಜವಹಾರ್‌ಲಾಲ್ ನೆಹರು ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  2. ಪರಿಸರ, ಸಾಮಾಜಿಕ ಆಡಳಿತಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿಯಾಗಿದೆ ಎಂದು ವಿಮಾನ ನಿಲ್ದಾಣದ ಪರಿಸರ ಮತ್ತು ಸಾಮಾಜಿಕ ಆಡಳಿತ ವಿಭಾಗದ ಮುಖ್ಯಸ್ಥ ಎಲ್. ಶ್ರೀಧರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ’ದಿ ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ’ ದಿಂದ ಆಯೋಜಿಸಿದ್ದ ಇಎಸ್‌ಜಿ ಸಮಾವೇಶದಲ್ಲಿ ಮಾತನಾಡಿ, ಶೀಘ್ರದಲ್ಲೇ ವಿಮಾನ ನಿಲ್ದಾಣದಲ್ಲಿ ಮಳೆ ನೀರಿನ ಸಂಗ್ರಹದ ಮೂಲಕ ಶೇಖಡ 100ರಷ್ಟು ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದರು.
  3. ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ಇಂದು ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಳಗಾವಿಯಲ್ಲಿ ರಾಷ್ಟ್ರೀಯ ಸಾಂಪ್ರದಾಯಿಕ ಔಷಧ ಸಂಸ್ಥೆ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಕೆಎಲ್‌ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
  4. ಜಮ್ಮು-ಕಾಶ್ಮೀರದ ಅನಂತ್ ನಾಗ್-ರಾಜೌರಿ ಲೋಕಸಭಾ ಕ್ಷೇತ್ರದಲ್ಲಿ ದಾಖಲೆ ಮಟ್ಟದ ಮತದಾನವಾಗಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜನರನ್ನು ಅಭಿನಂದಿಸಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳ ಬಲವರ್ಧನೆಗೆ ಜನರ ಪಾಲ್ಗೊಳ್ಳುವಿಕೆ ಪ್ರಮುಖ ಕೊಡುಗೆ ನೀಡಲಿದೆ. ಜಮ್ಮು-ಕಾಶ್ಮೀರದ ನಾಗರಿಕರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ್ದಾರೆ ಎಂದು ಹೇಳಿದ್ದಾರೆ.
  5. ಉತ್ತರ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತ ಬೀತಿ ಹಿನ್ನೆಲೆಯಲ್ಲಿ ಸನ್ನದ್ಧತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಮಹತ್ವದ ಸಭೆ ನಡೆಸಿದರು. ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಯ ಅಧಿಕಾರಿಗಳು ಚಂಡಮಾರುತ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
  6. ರೆಮಲ್ ಚಂಡಮಾರುತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ 8 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಬಾಂಗ್ಲಾದೇಶದ ವಿಪತ್ತು ನಿರ್ವಹಣೆ ಹಾಗೂ ಪರಿಹಾರ ಖಾತೆ ರಾಜ್ಯ ಸಚಿವ ಮಹಿಬೂರ್ ರೆಹಮಾನ್ ಮಾತನಾಡಿ, ಜನರ ಸುರಕ್ಷತೆಗಾಗಿ ವ್ಯಾಪಕ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದರು.
  7. ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್‌ನ ತಲಾ 13, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್‌ನ 3 ಮತ್ತು ಚಂಡೀಗಢ್ ಕೇಂದ್ರಾಡಳಿತ ಪ್ರದೇಶದ 1 ಲೋಕಸಭಾ ಕ್ಷೇತ್ರಗಳಲ್ಲಿ ಜೂನ್ 1 ರಂದು ಮತದಾನ ನಡೆಯಲಿದೆ.
  8. ಕೆನರಾ ಬ್ಯಾಂಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತು 45 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.
  9. ರಾಜ್‌ಕೋಟ್ ಅಗ್ನಿ ದುರಂತದಲ್ಲಿ. ಮೃತಪಟ್ಟವರನ್ನು ಗುರುತು ಹಚ್ಚಲು ಡಿಎನ್‌ಎ ಮಾದರಿಯನ್ನು ಅಗತ್ಯ ಪರಿಕ್ಷೆಗಾಗಿ ಕಳುಹಿಸಲಾಗಿದೆ. ಈ ದುರಂತದ ವಿಚಾರವನ್ನು ಗುಜರಾತ್ ಹೈಕೋರ್ಟ್ ಖುದ್ದಾಗಿ ಪರಿಗಣನೆಗೆ ತೆಗೆದುಕೊಂಡಿದ್ದು, ಈ ಪ್ರಕರಣ ಇಂದು ವಿಚಾರಣೆಗೆ ಬರಲಿದೆ.
  10. ಹಿರಿಯ ಬಿಜೆಪಿ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಿರ್ಜಾಪುರ್‌ದಲ್ಲಿ ನಿನ್ನೆ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿ, ಐಎನ್‌ಡಿಐ ಮೈತ್ರಿಕೂಟ ಜಾತಿವಾದಿ ಹಾಗೂ ಕೋಮುವಾದಿ ಎನ್ನುವುದನ್ನು ದೇಶದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಬಿಜೆಪಿ ಎನ್‌ಡಿಎ ಬಡವರು, ದುರ್ಬಲರು ಮತ್ತು ಹಿಂದುಳಿದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
  11. ಹಿರಿಯ ಕಾಂಗ್ರೆಸ್ ಧುರೀಣ ರಾಹುಲ್ ಗಾಂಧಿ ಅವರು, ಹಿಮಾಚಲ ಪ್ರದೇಶದ ಶಿಮ್ಲಾ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಚುನಾವಣಾ ರ‍್ಯಾಲಿ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ಹೋರಾಡುತ್ತಿರುವ ಚುನಾವಣೆಯಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.

ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.

ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಕ್ರೀಡೆ

ಬೆಳಗಿನ ಸುದ್ದಿ ಮುಖ್ಯಾಂಶಗಳು

Published

on

ಬೆಳಗಿನ ಸುದ್ದಿ ಮುಖ್ಯಾಂಶಗಳು

  1. ರಾಜ್ಯ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮುಂದಿನ ತಿಂಗಳ 3 ರಂದು ಚುನಾವಣೆ ನಡೆಯಲಿದೆ. ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 91ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.
  2. ದೇಶದ ಉತ್ತರದ ರಾಜ್ಯಗಳಲ್ಲಿ ನಿನ್ನೆ ತೀವ್ರ ಬಿಸಿಗಾಳಿ ವಾತಾವರಣ ಉಂಟಾಗಿತ್ತು. ಮುಂದಿನ 4 ದಿನಗಳಲ್ಲಿ ವಾಯವ್ಯ ಪೂರ್ವ ಹಾಗೂ ಮಧ್ಯಭಾರತದ ಬಯಲು ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚಿಸಿದೆ.
  3. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶಾದ್ಯಂತ 40 ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರ ಉಕ್ಕೇರಲಿದ್ದು, ಮುಂಜಾಗ್ರತಾ ಕ್ರಮವಾಗಿ ಬುಧವಾರದವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
  4. ತೈವಾನ್‌ನ ಅಧ್ಯಕ್ಷ ಹುದ್ದೆ ಆಯ್ಕೆಯಾಗಿರುವ ಲೈ ಛಿಂಗ್-ತೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ. ಕಳೆದ 4 ವರ್ಷಗಳಿಂದ ದೇಶದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ 64 ವರ್ಷದ ಲೈ ಅವರು, ತೈವಾನ್‌ನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.
  5. ಶ್ರೀಲಂಕಾದ ಸೀತಾಮಾತೆ ಮಂದಿರ-ಸೀತಾ ಇಳಿಯಾದಲ್ಲಿ ನಿನ್ನೆ ಕುಂಬಾಭಿಷೇಕ ಶ್ರದ್ಧಾ-ಭಕ್ತಿ ಸಡಗರ ಸಂಭ್ರಮಗಳಿಂದ ಜರುಗಿತು. ಅಯೋಧ್ಯೆಯ ಸರಯೂ ನದಿಯಿಂದ ತರಲಾಗಿದ್ದ ಸುಮಾರು 25ಲೀಟರ್ ಪವಿತ್ರ ಜಲದಿಂದ ಮಂದಿರದ ಗೋಪುರಕ್ಕೆ ಅಭಿಷೇಕ ನೆರವೇರಿಸಲಾಯಿತು. ಭಾರತ-ನೇಪಾಳ, ಶ್ರೀಲಂಕಾ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ್ದ ಭಕ್ತಾದಿಗಳು ಈ ದೃಶ್ಯವನ್ನು ಕಣ್ಮನಗಳಲ್ಲಿ ತುಂಬಿಕೊಂಡರು.
  6. ಭಾರತದ ಗ್ರಾಂಡ್ ಮಾಸ್ಟರ್ ಅರವಿಂದ್ ಚಿದಂಬರಂ ಶಾರ್ಜಾ ಮಾಸ್ಟರ್‍ಸ್ ಚೆಸ್ ಪಂದ್ಯಾವಳಿಯಲ್ಲಿ ಅತಿಥೇಯ ಶಾರ್ಜಾದ ಎ.ಆರ್. ಸುಲೆಹ್ ಸಲೀಂ ಅವರನ್ನು ಪರಾಭವಗೊಳಿಸಿ 4.5ಅಂಕಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
  7. ಗುವಾಹಾಟಿಯಲ್ಲಿ ನಿನ್ನೆ ರಾತ್ರಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ಕೊಲ್ಕೊತ್ತಾ ನೈಟ್ ರೈಡರ್‍ಸ್ ನಡುವಿನ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಕೆಲಕಾಲ ಮಳೆ ಬಂದು ನಿಂತ ನಂತರ ನಡೆದ ಟಾಸ್ ಗೆದ್ದ ಕೊಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಪುನಃ ಮಳೆ ಬಂದ ಹಿನ್ನೆಲೆ ಪಂದ್ಯ ರದ್ದುಗೊಳಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ವಿಡಿಯೋ | ಕೆಡಿ ಸೆಟ್ಟಲ್ಲಿ ಜೋಗಿ ಪ್ರೇಮ್‌ ಗೆ ಶಿಲ್ಪಾ ಶೆಟ್ಟಿ ಮಾಡಿದ್ದೇನು..?

ಸುದ್ದಿದಿನ ಡೆಸ್ಕ್ : ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಶೋ ಮ್ಯಾನ್‌ ಪ್ರೇಮ್‌ ಕತ್ತು ಹಿಸುಕಿ ಕೇಕೆ ಹೊಡೆದಿರೋ ಘಟನೆ ನಡೆದಿದೆ. ಕೆಡಿ ಸಿನಿಮಾದ ಮೂಲಕ ಕನ್ನಡಕ್ಕೆ...

ದಿನದ ಸುದ್ದಿ3 hours ago

ಜೂನ್. 1 ರಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡ್‍ನೆಸ್,...

ದಿನದ ಸುದ್ದಿ3 hours ago

ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ

ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್‍ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ...

ದಿನದ ಸುದ್ದಿ17 hours ago

ಚನ್ನಗಿರಿ | ರಕ್ತದಾನ ಶಿಬಿರ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಎನ್ ಎಸ್ ಎಸ್, ರೋವರ್ಸ್ ಅಂಡ್ ರೇಂಜರ್ಸ್ ಮತ್ತು ಯುವ ರೆಡ್...

ದಿನದ ಸುದ್ದಿ1 day ago

ಹಂಪಿಯಲ್ಲಿ ಎಂಟು ಐತಿಹಾಸಿಕ ಬಾವಿಗಳು ಪತ್ತೆ

ಸುದ್ದಿದಿನ ಡೆಸ್ಕ್ : ಕಳೆದ ವಾರ ಸುರಿದ ಮಳೆಯಿಂದಾಗಿ ಕರ್ನಾಟಕದ ವಿಜಯನಗರ ಜಿಲ್ಲೆಯ ವಿಶ್ವ ಪಾರಂಪರಿಕ ತಾಣವಾದ ಹಂಪಿಯಲ್ಲಿ ಎಂಟು ಪುರಾತನ ಬಾವಿಗಳು ಪತ್ತೆಯಾಗಿವೆ ಎಂದು ಪುರಾತತ್ವ...

ದಿನದ ಸುದ್ದಿ2 days ago

ಲವ್ ಜಿಹಾದ್ ವಿರುದ್ಧ ಸಹಾಯವಾಣಿ

ಸುದ್ದಿದಿನ,ದಾವಣಗೆರೆ: ಶ್ರೀ ರಾಮಸೇನೆ, ಕರ್ನಾಟಕ ವತಿಯಿಂದ ಲವ್ ಜಿಹಾದಿಗಳೇ ಎಚ್ಚರ, ಕೊಡುವೆವು ಉತ್ತರ ಎನ್ನುವ ಘೋಷಣೆಯೊಂದಿಗೆ ಲವ್ ಜಿಹಾದಿನಲ್ಲಿ ಸಿಲುಕಿ ಸಂಕಷ್ಟ ಪಡುತ್ತಿರುವವರ ಅನುಕೂಲಕ್ಕಾಗಿ ರಾಜಾದ್ಯಂತ 24*7...

ದಿನದ ಸುದ್ದಿ2 days ago

ಮತದಾನದಲ್ಲಿ ಮಹಿಳೆಯರದೇ ಮೇಲುಗೈ

ಸುದ್ದಿದಿನ ಡೆಸ್ಕ್ : ಲೋಕಸಭೆಯ ಆರನೇ ಹಂತದ ಚುನಾವಣೆಯಲ್ಲಿ ಪುರುಷರಿಗಿಂತ ಶೇ.3ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ....

ದಿನದ ಸುದ್ದಿ3 days ago

ಹಿಟ್ ಅಂಡ್ ರನ್ ಕೇಸ್ | ಫೊರೆನ್ಸಿಕ್ ಸಾಕ್ಷ್ಯದಿಂದ ಆರೋಪಿಗಳ ಬಂಧನ

ಸುದ್ದಿದಿನ,ಬೆಂಗಳೂರು: ಟ್ರಕ್‌ನ ಹಿಂಬದಿಯಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯ ರಕ್ತ ಮತ್ತು ಮಾಂಸದ ಕುರುಹುಗಳು ಆರೋಪಿಗಳ ಬಂಧನದೊಂದಿಗೆ ಐದು ತಿಂಗಳ ಹಿಂದಿನ ಹಿಟ್ ಅಂಡ್ ರನ್ ಪ್ರಕರಣವನ್ನು ಭೇದಿಸಲು ಪೊಲೀಸರಿಗೆ...

ದಿನದ ಸುದ್ದಿ4 days ago

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು

ಸುದ್ದಿದಿನ ಡೆಸ್ಕ್ : ಇತ್ತೀಚೆಗಷ್ಟೇ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಬಿಎಸ್ ವೈ ಅವರ ಬಳಿ ಸಹಾಯ ಕೋರಲು ಹೋದಾಗ...

ಕ್ರೀಡೆ4 days ago

ಬೆಳಗಿನ ಪ್ರಮುಖ ಸುದ್ದಿಗಳು

ಸುದ್ದಿದಿನ ಕನ್ನಡ ಬೆಳಗಿನ ಪ್ರಮುಖ ಸುದ್ದಿಗಳು ಇಂದು ಭಾರತದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಹಾರ್‌ಲಾಲ್ ನೆಹರು ಅವರ ಪುಣ್ಯತಿಥಿ. ಸ್ವಾತಂತ್ರ‍್ಯ ನಂತರ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸಿದ್ದ ಅವರು,...

Trending