/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ರಾಜ್ಯದಲ್ಲಿ ಶುಕ್ರವಾರ 515 ಕೊರೋನಾ ಪಾಸಿಟಿವ್ ಪ್ರಕರಣ, ಉಡುಪಿಯಲ್ಲಿ 204 ಕೇಸ್

Published

on

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಂದು ಒಂದೇ ದಿನದಲ್ಲಿ 515ಮಂದಿಗೆ ಕೊರೋನ ಪಾಸಿಟಿವ್ ಬಂದಿದೆ. ಇದು ರಾಜ್ಯದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಕೊರೋನ ಪ್ರಕರಣಗಳು ದೃಢಪಟ್ಟಿವೆ. ಉಡುಪಿ ಜಿಲ್ಲೆಯಲ್ಲಿ 204 ಕೊರೋನ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 4,835ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾದಂತೆ ಕಾಣುತ್ತಿಲ್ಲ. ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಕೇಸ್ ಗಳು ಹೆಚ್ಚಾಗುತ್ತಿವೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ಕೋವಿಡ್19 ಮಾಹಿತಿ: 5ನೇ ಜೂನ್ 2020

  • ಒಟ್ಟು ಪ್ರಕರಣಗಳು: 4835
  • ಮೃತಪಟ್ಟವರು: 57
  • ಗುಣಮುಖರಾದವರು: 1688
  • ಹೊಸ ಪ್ರಕರಣಗಳು: 515

ಇತರೆ ಮಾಹಿತಿ

ಜಿಲ್ಲಾವಾರು ಸೋಂಕಿತರು, ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರುವವರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version