ದಿನದ ಸುದ್ದಿ
ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈಗೆ ಸಂಕಷ್ಟ
ಸುದ್ದಿದಿನ ಡೆಸ್ಕ್: ಹಿಂದೂಗಳ ಭಾವನೆ ಕೆರಳಿಸಿದ ಆರೋಪದ ಮೇಲೆ ಪ್ರಕಾಶ್ ರೈ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಗೋವುಗಳ ಬಗ್ಗೆ ಕೀಳಾಗಿ ಮಾತನಾಡಿದ ಹಿನ್ನೆಲೆಯಲ್ಲಿ ವಕೀಲ ಎನ್.ಕಿರಣ್ ಎಂಬುವವರಿಂದ ಪಿಸಿಆರ್ ದಾಖಲಿಸಿದ್ದಾರೆ. ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ದೂರು ನೀಡಿದ್ದಾರೆ.
ಹಲವೆಡೆ ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಪ್ರಕಾಶ್ ರಾಜ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮನವಿ ಮಾಡಿದ್ದಾರೆ. ಹನುಮಂತನಗರ ಪೊಲೀಸ್ ಠಾಣೆಗೂ ವಕೀಲ ಕಿರಣ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ 4ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿದ್ದು, ನವೆಂಬರ್ 25ಕ್ಕೆ
ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.