ದಿನದ ಸುದ್ದಿ
ಮುಂಗಾರು ಹಂಗಾಮಿನ ರಸಗೊಬ್ಬರಗಳಿಗೆ 61 ಸಾವಿರ ಕೋಟಿ ರೂಪಾಯಿ ಸಬ್ಸಿಡಿಗೆ ಕೇಂದ್ರ ಸಂಪುಟ ಅನುಮೋದನೆ
ಸುದ್ದಿದಿನ ಡೆಸ್ಕ್ : ಜಮ್ಮು-ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯ ಚೆನಾಬ್ ನದಿ ತೀರದಲ್ಲಿ 4 ಸಾವಿರದ 500ಕೋಟಿ ರೂಪಾಯಿ ವೆಚ್ಚದಲ್ಲಿ 540 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆ ನಿರ್ಮಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಯೋಜನೆಯಡಿ 1ಸಾವಿರದ 975ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಿದ್ದು, 54 ತಿಂಗಳಲ್ಲಿ ಘಟಕ ಕಾರ್ಯಾರಂಭ ಮಾಡಲಿದೆ. ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಇದು ಸುಮಾರು 2 ಸಾವಿರದ 700 ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗ ಒದಗಿಸುತ್ತದೆ.
ಮುಂಗಾರು ಹಂಗಾಮಿಗಾಗಿ ಪೌಷ್ಟಿಕಾಂಶ ಆಧರಿತ ಫಾಸ್ಫೇಟ್ ಮತ್ತು ಪೊಟ್ಯಾಷ್ ಸತ್ವವುಳ್ಳ ರಸಗೊಬ್ಬರಗಳಿಗೆ ನೀಡುವ ಸಬ್ಸಿಡಿಯನ್ನು ಕ್ಯಾಬಿನೆಟ್ ಬುಧವಾರ ಅನುಮೋದಿಸಿದೆ.
ಈ ವರ್ಷ ಸಬ್ಬಿಡಿ ಮೊತ್ತ ಪ್ರತಿ ಚೀಲಕ್ಕೆ50 ರಷ್ಟು ಹೆಚ್ಚಳವಾಗಿದೆ. ಒಟ್ಟು 61 ಸಾವಿರ ಕೋಟಿ ರೂಪಾಯಿ ವೆಚ್ಚದ ಸಬ್ಬಿಡಿಗಳಿಗೆ ಅನುಮೋದನೆ ನೀಡಲಾಗಿದೆ.
ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ-ಪಿಎಂ ಸ್ವನಿಧಿಯನ್ನು ಈ ವರ್ಷದ ಮಾರ್ಚ್‌ನಿಂದ ಡಿಸೆಂಬರ್ 2024ರ ವರೆಗೆ ಮುಂದುವರಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಠಾಕೂರ್ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243