ದಿನದ ಸುದ್ದಿ

ಬಂದರುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧ : ಸಚಿವ ನಿತಿನ್ ಗಡ್ಕರಿ

Published

on

ಸುದ್ದಿದಿನ ಡೆಸ್ಕ್ : ವಿಶ್ವ ದರ್ಜೆಯ ರಸ್ತೆಗಳ ನಿರ್ಮಾಣದ ಜಾಲದ ಮೂಲಕ ಬಂದರುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ದೇಶಾದ್ಯಂತ ಬಂದರುಗಳು ಮತ್ತು ದೇಶೀಯ ಉತ್ಪಾದನೆ ಮತ್ತು ಬಳಕೆ ಕೇಂದ್ರಗಳ ನಡುವೆ ಹೆಚ್ಚಿನ ಸಂಪರ್ಕ ಕಲ್ಪಿಸಲಾಗುವುದು. ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರಿವು ಸುಮಾರು 3 ಸಾವಿರದ 500 ಕೋಟಿ ರೂಪಾಯಿ ವೆಚ್ಚದಲ್ಲಿ ಬಹುಪಥ ರಸ್ತೆ ಸಂಪರ್ಕ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಜವಾಹರಲಾಲ್ ನೆಹರು ಬಂದರು ಟ್ರಸ್ಟ್ ಅನ್ನು ಮತ್ತು ಹಿಂಟರ್‌ಲ್ಯಾಂಡ್ ರಸ್ತೆ ಜಾಲಕ್ಕೆ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಗಡ್ಕರಿ ಟ್ವೀಟ್ ಮಾಡಿದ್ದಾರೆ.

ಈ ಯೋಜನೆಯಿಂದ ವಾಹನಗಳ ಪ್ರಮಾಣ ಗಣನೀಯ ಇಳಿಕೆಯಾಗಿ, ಪ್ರಯಾಣ ಸಮಯ ಮತ್ತು ಕಾರ್ಯಾಚರಣೆ ವೆಚ್ಚ ಕಡಿಮೆಯಾಗಲಿದೆ. ಎಲ್ಲಕ್ಕಿಂತ ವಿಶೇಷವಾಗಿ ಈ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಿ, ರಫ್ತು ವಹಿವಾಟು ಹೆಚ್ಚಾಗಲಿದೆ. ಜೊತೆಗೆ ನವಿ ಮುಂಬೈ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ಗೆ ಸಂಪರ್ಕ ಕಲ್ಪಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version