Connect with us

ರಾಜಕೀಯ

ಕೇಂದ್ರ ಸರ್ಕಾರ: ನೈತಿಕ ಜವಾಬ್ದಾರಿ ಹೊತ್ತ ರಾಜೀನಾಮೆಗಳ ಸುತ್ತಮುತ್ತ..!

Published

on

  • ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು

ಆಗಸ್ಟ್ 1956ರಲ್ಲಿ ಆಂಧ್ರ ಪ್ರದೇಶದ ಮೆಹಬೂಬ್ ನಗರದಲ್ಲಿ ದೊಡ್ಡ ರೈಲು ಅಪಘಾತ ಜರುಗುತ್ತದೆ. 112 ಪ್ರಯಾಣಿಕರು ಅಸುನೀಗುತ್ತಾರೆ. ನೈತಿಕ ಜವಾಬ್ದಾರಿಯನ್ನು ಹೊತ್ತ ರೈಲು ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆಯನ್ನು ನೀಡುತ್ತಾರೆ. ಆದರೆ ಪ್ರಧಾನಿ ನೆಹರು ಅದನ್ನು ಸ್ವೀಕರಿಸುವುದಿಲ್ಲ‌.

ನಂತರ ಅದೇ ವರ್ಷ ನವೆಂಬರ್ ತಿಂಗಳಲ್ಲಿ ತಮಿಳುನಾಡಿನ ಅರಿಯಲೂರ್ನಲ್ಲಿ ಜರುಗಿದ ಭೀಕರ ರೈಲು ಅಪಘಾತದಲ್ಲಿ 144 ಮಂದಿ ಸಾಯುತ್ತಾರೆ. ಆಗಲೂ ಶಾಸ್ತ್ರಿ ರಾಜೀನಾಮೆಯನ್ನು ನೀಡಲು ಮುಂದಾಗುತ್ತಾರೆ. ಬೇಗನೆ ಸ್ವೀಕರಿಸಬೇಕೆಂದು ಪ್ರಧಾನಿಯವರನ್ನು ಒತ್ತಾಯಿಸುತ್ತಾರೆ. ನೆಹರು ಮಾತನಾಡಿದ ತರುವಾಯವೂ ಶಾಸ್ತ್ರಿ ತಾವು ತೆಗೆದುಕೊಂಡ ನಿರ್ಧಾರದಿಂದ ವಿಮುಖರಾಗುವುದಿಲ್ಲ.

ಲೋಕಸಭೆಯಲ್ಲಿ ಈ ವಿಷಯದ ಬಗೆಗೆ ಮಾತನಾಡುತ್ತ ನೆಹರು ತಾವು ಶಾಸ್ತ್ರಿಯವರ ರಾಜೀನಾಮೆಯನ್ನು ಸ್ವೀಕರಿಸಲೇ ಬೇಕಾದ ಅನಿವಾರ್ಯತೆಯಿರುವುದೆಂದು ತಿಳಿಸಿದಾಗ, 30 ಸಂಸದರು ಈ ಅಪಘಾತಕ್ಕೆ ರೈಲ್ವೆ ಬೋರ್ಡ್ ಕಾರಣವೆಂದು, ಶಾಸ್ತ್ರಿಯವರು ಜವಾಬ್ದಾರರಲ್ಲ ಎಂದು ತಿಳಿಸುತ್ತಾರೆ. ಶಾಸ್ತ್ರಿ ತಮ್ಮ ಪಟ್ಟನ್ನು ಸಡಿಲಿಸುವುದಿಲ್ಲ. ಕೊನೆಗೆ ವಿಧಿಯಿಲ್ಲದೇ ನೆಹರು ರಾಷ್ಟ್ರಪತಿಗೆ ರಾಜೀನಾಮೆಯನ್ನು ರವಾನಿಸುತ್ತಾರೆ.

*ಈ ಘಟನೆಗಳು ಜರುಗಿದ 43 ವರ್ಷಗಳ ತರುವಾಯ ಅಂದರೆ ಆಗಸ್ಟ್ 1999ರಲ್ಲಿ ಅಸ್ಸಾಂನ ಗೈಸಲ್ನಲ್ಲಿ ಜರುಗಿದ ರೈಲು ದುರಂತದಲ್ಲಿ 290 ಜನ ಸಾಯುತ್ತಾರೆ. ಆಗಿನ ರೈಲು ಸಚಿವ ನಿತೀಶ್ ಕುಮಾರ್ ನೈತಿಕ ಜವಾಬ್ದಾರಿಯನ್ನು ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಾರೆ.*

2000ರಲ್ಲಿ ಎರಡು ರೈಲು ಅವಘಡಗಳು ಜರುಗುತ್ತವೆ. ರೈಲು ಖಾತೆಯ ಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಯನ್ನು ಸಲ್ಲಿಸುತ್ತಾರೆ. ಆದರೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರಾಜೀನಾಮೆಯನ್ನು ತಿರಸ್ಕರಿಸುತ್ತಾರೆ.

ಪ್ರಸ್ತುತ ಉತ್ತರ ಪ್ರದೇಶದ ಲಖೀಂಪುರದ ದಾರುಣ ಘಟನೆಯತ್ತ ಗಮನವನ್ನು ಹರಿಸೋಣ. ಅಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸರ್ಕಾರದ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾರ ಕಾರನ್ನು ಚಲಿಸಲಾಗುತ್ತದೆ. ರೈತರೂ ಸೇರಿದಂತೆ ಎಂಟು ಮಂದಿ ಮರಣವನ್ನಪ್ಪುತ್ತಾರೆ. ಪ್ರತ್ಯಕ್ಷದರ್ಶಿಗಳು ಸಚಿವರ ಮಗ ಆಶೀಶ್ ಮಿಶ್ರಾ ಸ್ವತಃ ಗಾಡಿಯನ್ನು ಓಡಿಸುತ್ತಿದ್ದರೆಂದು ತಿಳಿಸಿದ್ದಾರೆ.

ಈ ಹೇಯ ಘಟನೆಗೆ ಸಂಬಂಧಿಸಿದ ಕೆಲವು ವೀಡಿಯೊಗಳು ಹರಿದಾಡುತ್ತಿವೆ. ರೈತ ಸಂಘಗಳು ಮತ್ತು ವಿಪಕ್ಷಗಳು ಅಜಯ್ ಕುಮಾರ್ ಮಿಶ್ರಾ ರಾಜೀನಾಮೆಯನ್ನು ನೀಡಬೇಕೆಂದು ಒತ್ತಾಯಿಸಿವೆ. ಆದರೆ ತನ್ನ ಮಗ ಘಟನೆ ಜರುಗಿದ ಸ್ಥಳದಲ್ಲಿ ಇರಲಿಲ್ಲ , ತಾವು ರಾಜೀನಾಮೆಯನ್ನು ನೀಡುವುದಿಲ್ಲ ಎಂದು ಮಿಶ್ರಾ ತಿಳಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯ ಉತ್ತರ ಪ್ರದೇಶದ ಪೊಲೀಸರು ಸರಿಯಾಗಿ ತನಿಖೆಯನ್ನು ಜರುಗಿಸುತ್ತಿಲ್ಲ ಎಂದು ತರಾಟೆ ತೆಗೆದುಕೊಂಡಿತು. ತರುವಾಯ ಆಶೀಶ್ ಮಿಶ್ರಾ ಪೊಲೀಸರ ವಿಚಾರಣೆಗೆ ಹಾಜರಾದದ್ದು ಎಲ್ಲ ರೀತಿಯಿಂದ ಬಲಿಷ್ಠರಾದವರ ಕಾರುಬಾರು ನಮ್ಮ ದೇಶದಲ್ಲಿ ಹೇಗೆ ಜರುಗುತ್ತಿದೆ ಎಂಬುದರ ದ್ಯೋತಕವೆನ್ನಬಹುದು.

ಇಂತಹ ಪ್ರಕರಣಗಳು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರದ ಗೃಹ ಖಾತೆಗೆ ತಲುಪುವ ಸಾಧ್ಯತೆಗಳು ಇದ್ದೇ ಇರುತ್ತವೆ. ಪೊಲೀಸ್ ಇಲಾಖೆ ಕೂಡ ಕೇಂದ್ರ ಸರ್ಕಾರದ ಗೃಹ ಖಾತೆಯ ಸುಪರ್ದಿಗೆ ಬರುತ್ತದೆ. ಹೀಗಿರಬೇಕಾದರೇ, ಅಜಯ್ ಮಿಶ್ರಾ ಸಚಿವ ಸ್ಥಾನದಲ್ಲಿ ಮುಂದುವರೆದರೇ, ನ್ಯಾಯ ಹಳ್ಳದ ಹಿಡಿಯುವುದರಲ್ಲಿ ಸಂಶಯವೇ ಇಲ್ಲ ಎಂಬುದು ಸಾರ್ವಜನಿಕ ವಲಯದ ಪ್ರಜ್ಞಾವಂತರ ಅಳಲಾಗಿದೆ.

ಈ ಆಘಾತಕಾರಿ, ಅಮಾನವೀಯ ಘಟನೆಯ ಬಗೆಗೆ ನಮ್ಮ ಪ್ರಧಾನಿ ದಿವ್ಯ ಮೌನವನ್ನು ವಹಿಸಿದ್ದಾರೆ. ಅದು ಏನನ್ನು ಸೂಚಿಸುತ್ತದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ತಮ್ಮದು ಭಿನ್ನ ಪಕ್ಷವೆಂದು ಟಾಂಟಾಂ ಮಾಡುವವರ ಈ ವರಸೆ ಸಾರ್ವಜನಿಕ ವಲಯದಲ್ಲಿ ಕಟು ಟೀಕೆಗೆ ಒಳಗಾಗಿದೆ.

(ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು
ಇಮೈಲ್: msmurali1961@gmail.com
ಜಂಗಮವಾಣಿ :9481200960)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ

Published

on

ಜಿಲ್ಲೆಗಳತ್ತ ಸಚಿವರ ಹೆಜ್ಜೆ: ತಿಂಗಳಿಗೆ 2 ದಿನ ಜನರ ಬಳಿಗೆ ಸರ್ಕಾರ, ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಡಿಕೆಶಿ ಸೂಚನೆ

ಸುದ್ದಿದಿನ,ಬೆಂಗಳೂರು: ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರತಿಯೊಬ್ಬ ಸಚಿವರು ತಿಂಗಳಿಗೆ ಎರಡು ದಿನ ಜಿಲ್ಲೆಗಳಿಗೆ ಭೇಟಿ ನೀಡುವಂತೆ ಸೂಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.

ಸಚಿವರು ಕೇವಲ ಬೆಂಗಳೂರಿನಲ್ಲಿ ಕುಳಿತು ಆಡಳಿತ ನಡೆಸುವುದಕ್ಕಿಂತ, ಜಿಲ್ಲೆಗಳಿಗೆ ತೆರಳಿ ಜನರೊಂದಿಗೆ ನೇರ ಸಂಪರ್ಕ ಸಾಧಿಸಬೇಕು ಎಂಬ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ. ಸರ್ಕಾರದ ಯೋಜನೆಗಳ ಅನುಷ್ಠಾನ, ಸ್ಥಳೀಯ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರಿಂದಲೇ ಮಾಹಿತಿ ಪಡೆಯಲು ಇದು ಸಹಕಾರಿಯಾಗಲಿದೆ.

http://Visit : www.suddidina.com

ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲೆಗಳಿಗೆ ಭೇಟಿ

ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರದಂದು ಸಚಿವರು ತಮ್ಮ ಜವಾಬ್ದಾರಿಯಲ್ಲಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಸಭೆ ನಡೆಸುವಂತೆ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ವೇಳೆ ಜನರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕ್ರಮಕ್ಕೆ ಒತ್ತು ನೀಡಲಾಗುತ್ತದೆ.

ಇದರ ಜೊತೆಗೆ ಮುಂದಿನ ಹಂತದಲ್ಲಿ ಹೋಬಳಿ ಮಟ್ಟಕ್ಕೂ ಸಚಿವರ ಪ್ರವಾಸ ವಿಸ್ತರಿಸುವ ಚಿಂತನೆ ಇದೆ. ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೂ ಸಚಿವರು ಭೇಟಿ ನೀಡುವ ರೀತಿಯಲ್ಲಿ ಕಾರ್ಯಕ್ರಮ ರೂಪಿಸುವ ಉದ್ದೇಶವಿದೆ.

ಪಂಚಾಯಿತಿ ಮಟ್ಟದಲ್ಲೂ ಜನರ ಧ್ವನಿಗೆ ಆದ್ಯತೆ

ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ಶಾಸಕರ ಪಾತ್ರಕ್ಕೂ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಆಯಾ ಶಾಸಕರು ಪಂಚಾಯಿತಿ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಜನರ ಭಾವನೆಗಳನ್ನು ಸರ್ಕಾರದ ಗಮನಕ್ಕೆ ತರಲು ಅನುಕೂಲವಾಗುವಂತೆ ಪ್ರಜಾಸೇವೆ ಇಲಾಖೆಯನ್ನು ರಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹೊಸ ಸರ್ಕಾರದ ಯೋಜನೆಗಳ ಬಗ್ಗೆ ಶಾಸಕರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದು, ತಮ್ಮ ಕ್ಷೇತ್ರಗಳ ಅಭಿವೃದ್ಧಿಯೇ ಪ್ರಮುಖ ಗುರಿಯಾಗಬೇಕು ಎಂಬ ಸಂದೇಶವನ್ನು ಮುಖ್ಯಮಂತ್ರಿ ನೀಡಿದ್ದಾರೆ.

ಬರ ಪರಿಸ್ಥಿತಿ: 100ಕ್ಕೂ ಹೆಚ್ಚು ತಾಲ್ಲೂಕುಗಳತ್ತ ಸರ್ಕಾರದ ಗಮನ

ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತೂ ಸರ್ಕಾರ ಚರ್ಚೆ ನಡೆಸಿದೆ. 102ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಪ್ರವಾಸ ಮತ್ತು ಅಧ್ಯಯನ ಪೂರ್ಣಗೊಂಡ ಬಳಿಕ ಬರಪೀಡಿತ ಪ್ರದೇಶಗಳ ಘೋಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ₹1 ಕೋಟಿ ನೆರವು ನೀಡಲಾಗಿದೆ ಎಂದು ಹೇಳಿದ್ದಾರೆ.

ಮುಂದಿನ ಹಂತದಲ್ಲಿ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಪಡೆಯಲು ನಿಯೋಗದೊಂದಿಗೆ ತೆರಳಿ ಮನವಿ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.

SIR ಕುರಿತು ಸಿಎಂ ಪ್ರತಿಕ್ರಿಯೆ

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಗ್ಗೆಯೂ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದಾರೆ. ಮತದಾರರ ಪಟ್ಟಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಬೂತ್ ಮಟ್ಟದಲ್ಲಿ ಸಭೆ ನಡೆಸಿ ಮತಪಟ್ಟಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಖಾಯಂ ನಿವಾಸ ಹಾಗೂ ಜಾತಿ ಪ್ರಮಾಣಪತ್ರಗಳನ್ನು ಸರ್ಕಾರದ ವತಿಯಿಂದ ಒದಗಿಸಲಾಗುತ್ತಿದೆ ಎಂದಿದ್ದಾರೆ.

ವಿಪಕ್ಷಗಳ ವಿರುದ್ಧ ರಾಜಕೀಯ ವಾಗ್ದಾಳಿ

ಇದೇ ವೇಳೆ ವಿರೋಧ ಪಕ್ಷಗಳ ವಿರುದ್ಧ ಮುಖ್ಯಮಂತ್ರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಡವರು ಹಾಗೂ ಬರ ಪರಿಸ್ಥಿತಿಯ ಬಗ್ಗೆ ಕಾಳಜಿ ವಹಿಸುವ ಬದಲು ವಿಪಕ್ಷಗಳು ರಾಜಕೀಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ ಎಂದು ಆರೋಪಿಸಿದ್ದಾರೆ. ಸರ್ಕಾರದ ಗುರಿ ಪ್ರಣಾಳಿಕೆಯಂತೆ ಪಾರದರ್ಶಕ ಆಡಳಿತ ನೀಡುವುದು ಮತ್ತು ರಾಜ್ಯದ ಹಿತಕ್ಕಾಗಿ ಕೆಲಸ ಮಾಡುವುದಾಗಿದೆ ಎಂದು ಹೇಳಿದ್ದಾರೆ.

Continue Reading

ದಿನದ ಸುದ್ದಿ

ಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್‌ಕಟ್‌ ಹೇಳಿದ ಡಿಕೆಶಿ

Published

on

ಆಸ್ತಿ ಬಗ್ಗೆ ಹೆಮ್ಮೆ, ಬದುಕಿನಲ್ಲಿ ಸರಳತೆ: ಡಿಕೆಶಿ ಹೇಳಿಕೆಯ ಸುತ್ತ ಚರ್ಚೆ

ಸುದ್ದಿದಿನ,ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ತಮ್ಮ ಆಸ್ತಿ ಮತ್ತು ಸರಳ ಜೀವನಶೈಲಿಯ ಕುರಿತು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಮಾತ್ರವಲ್ಲ, ಸಾರ್ವಜನಿಕರಲ್ಲೂ ಚರ್ಚೆಗೆ ಕಾರಣವಾಗಿದೆ. ಶ್ರೀಮಂತ ರಾಜಕಾರಣಿ ಎಂಬ ಗುರುತಿನ ನಡುವೆಯೂ, ತಾವು ಇಂದಿಗೂ ಹೇರ್‌ಕಟ್‌ಗೆ ಕೇವಲ 50 ರೂ. ಖರ್ಚು ಮಾಡುತ್ತೇನೆ ಎಂದು ಅವರು ಹೇಳಿರುವುದು ಗಮನ ಸೆಳೆದಿದೆ.

ಹೈಲೈಟ್ಸ್

  • ಈಗಲೂ 50 ರೂ. ನೀಡಿ ಹೇರ್‌ಕಟ್‌ ಮಾಡಿಸಿಕೊಳ್ಳುವುದಾಗಿ ಡಿಕೆಶಿ ಹೇಳಿದ್ದಾರೆ.
  • ದುಂದು ವೆಚ್ಚ ಇಷ್ಟವಿಲ್ಲ, ಅಗತ್ಯವಿರುವಷ್ಟೇ ಖರ್ಚು ಮಾಡುತ್ತೇನೆ ಮತ್ತು ಸರಳ ಜೀವನಕ್ಕೆ ಆದ್ಯತೆ ನೀಡುತ್ತೇನೆ
  • ತಮ್ಮ ಪೂರ್ವಜರು ಮತ್ತು ತಾವು ಸಂಪಾದಿಸಿರುವ ಆಸ್ತಿ ಎರಡು-ಮೂರು ಪೀಳಿಗೆಗೆ ಸಾಕಾಗುತ್ತದೆ
  • ‘ಅಮಿತ್‌ ಶಾ’ ಹೋಲಿಕೆ ಬೇಡ: ತಮ್ಮನ್ನು ಕಾಂಗ್ರೆಸ್‌ನ ಅಮಿತ್‌ ಶಾ ಎಂದು ಕರೆಯುವುದಕ್ಕೆ ಡಿಕೆಶಿ ವಿರೋಧ ವ್ಯಕ್ತಪಡಿಸಿದ್ದಾರೆ.
  • 2028ರ ವಿಶ್ವಾಸ: ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಎರಡು-ಮೂರು ಪೀಳಿಗೆಗೆ ಸಾಕಾಗುವಷ್ಟು ಆಸ್ತಿ’

ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್‌, ತಮ್ಮ ಪೂರ್ವಜರು ಮತ್ತು ತಾವು ಸಂಪಾದಿಸಿರುವ ಆಸ್ತಿ ಎರಡು-ಮೂರು ಪೀಳಿಗೆ ಕುಳಿತು ತಿನ್ನುವಷ್ಟು ಇದೆ ಎಂದು ಹೇಳಿದ್ದರು. ಮುಖ್ಯಮಂತ್ರಿ ಸ್ಥಾನವನ್ನು ಹಣ ಸಂಪಾದಿಸುವ ಉದ್ದೇಶಕ್ಕಾಗಿ ಬಳಸಿಕೊಳ್ಳುವುದಿಲ್ಲ. ಬದಲಾಗಿ ಕರ್ನಾಟಕದಲ್ಲಿ ಹೊಸ ಇತಿಹಾಸ ಸೃಷ್ಟಿಸುವುದು ಮತ್ತು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುವುದು ತಮ್ಮ ಗುರಿ ಎಂದು ಅವರು ಹೇಳಿದ್ದರು.

ಡಿಕೆ ಶಿವಕುಮಾರ್‌ ಅವರು ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪೈಕಿ ಒಬ್ಬರು ಎಂಬ ವಿಚಾರವೂ ಈ ಹಿಂದೆ ವರದಿಯಾಗಿತ್ತು. ಆದರೆ ತಮ್ಮ ವೈಯಕ್ತಿಕ ಜೀವನಶೈಲಿಯಲ್ಲಿ ದುಂದು ವೆಚ್ಚಕ್ಕೆ ಆದ್ಯತೆ ನೀಡುವುದಿಲ್ಲ ಎಂಬ ಸಂದೇಶವನ್ನು ಅವರು ಇದೀಗ ನೀಡಿದ್ದಾರೆ.

http://Visit : www.suddidina.com

50 ರೂ. ಹೇರ್‌ಕಟ್‌: ಸರಳ ಬದುಕಿನ ಉದಾಹರಣೆ

ಆ.26ರಂದು ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಡಿಕೆ ಶಿವಕುಮಾರ್‌ ತಮ್ಮ ಹೇರ್‌ಕಟ್‌ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. “ನಾನು ನನ್ನ ಹೇರ್‌ಕಟ್‌ಗಾಗಿ 50 ರೂ. ಖರ್ಚು ಮಾಡುತ್ತೇನೆ. ಸರಳ ಜೀವನ ನನಗೆ ಇಷ್ಟ. ದುಂದು ವೆಚ್ಚ ನನಗೆ ಇಷ್ಟವಿಲ್ಲ” ಎಂಬರ್ಥದಲ್ಲಿ ಅವರು ಮಾತನಾಡಿದ್ದಾರೆ.

ದಿಲ್ಲಿಯಲ್ಲಿಯೂ ತಾವು 50 ರೂ. ನೀಡಿ ಹೇರ್‌ಕಟ್‌ ಮಾಡಿಸಿಕೊಳ್ಳುವುದಾಗಿ ಹೇಳಿರುವ ಅವರು, ಜೀವನ ನಡೆಸಲು ಎಷ್ಟು ಅಗತ್ಯವೋ ಅಷ್ಟನ್ನೇ ಖರ್ಚು ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಅವರ ಆಸ್ತಿ ಪ್ರಮಾಣಕ್ಕಿಂತ ಅವರ ವೈಯಕ್ತಿಕ ಖರ್ಚಿನ ಈ ಉದಾಹರಣೆಯೇ ಇದೀಗ ಹೆಚ್ಚು ಗಮನ ಸೆಳೆಯುತ್ತಿದೆ.

‘ಕಾಂಗ್ರೆಸ್‌ನ ಅಮಿತ್‌ ಶಾ’ ಹೋಲಿಕೆಗೆ ಡಿಕೆಶಿ ವಿರೋಧ

ಇದೇ ಸಂದರ್ಶನದಲ್ಲಿ ತಮ್ಮನ್ನು ‘ಕಾಂಗ್ರೆಸ್‌ನ ಅಮಿತ್‌ ಶಾ’ ಎಂದು ಕರೆಯುವುದಕ್ಕೂ ಡಿಕೆ ಶಿವಕುಮಾರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ತಾವು ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತನಾಗಿದ್ದು, ಪಕ್ಷ ನೀಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದೇ ತಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

ಯುವಜನರ ಶಕ್ತಿ, ಆಲೋಚನೆ ಮತ್ತು ಮಹತ್ವಾಕಾಂಕ್ಷೆಗಳ ಮೇಲೆ ಕಾಂಗ್ರೆಸ್‌ ನಂಬಿಕೆ ಇಟ್ಟಿದೆ. ಯುವಕರಿಗೆ ಕಲಿಯಲು, ಹೊಸದನ್ನು ಸೃಷ್ಟಿಸಲು ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸುವುದು ತಮ್ಮ ದೃಷ್ಟಿಕೋನ ಎಂದು ಅವರು ಹೇಳಿದ್ದಾರೆ.

2028ರ ಚುನಾವಣೆಯಲ್ಲೂ ವಿಶ್ವಾಸ

2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಡಿಕೆ ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಗೆ ಹೋಲಿಸಿದರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನೂ ಅವರು ತಿಳಿಸಿದ್ದಾರೆ.

ಅಲ್ಲದೆ, 2029ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಡಿಕೆಶಿ ಅವರ ಇತ್ತೀಚಿನ ಸಂದರ್ಶನವು ಸರಳ ಜೀವನಶೈಲಿಯಿಂದ ಹಿಡಿದು ಕಾಂಗ್ರೆಸ್‌ನ ಭವಿಷ್ಯದ ರಾಜಕೀಯ ಗುರಿಗಳವರೆಗೆ ಹಲವು ವಿಚಾರಗಳನ್ನು ಮುನ್ನೆಲೆಗೆ ತಂದಿದೆ.

Continue Reading

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending