ದಿನದ ಸುದ್ದಿ
ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ನಿರ್ಬಂಧ
ಸುದ್ದಿದಿನ ಡೆಸ್ಕ್ : ದೇಶೀಯವಾಗಿ ಸಕ್ಕರೆ ಲಭ್ಯತೆ ದೃಷ್ಟಿಯಿಂದ ಸಕ್ಕರೆ ರಫ್ತು ಮಾಡುವುದಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ.
ದೆಹಲಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, ಪ್ರಸಕ್ತ ಹಂಗಾಮಿನಲ್ಲಿ ಭಾರತದಿಂದ ದಾಖಲೆ ಪ್ರಮಾಣದಲ್ಲಿ ಸಕ್ಕರೆ ರಫ್ತು ಮಾಡಲಾಗಿದೆ.
ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಹಬ್ಬಗಳ ಹಂಗಾಮು ಇರುವ ಹಿನ್ನೆಲೆಯಲ್ಲಿ ದೇಶೀಯವಾಗಿ ಸಕ್ಕರೆ ಲಭ್ಯ ಇರುವಂತೆ ಮುನ್ನೆಚ್ಚರಿಕೆ ವಹಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243