ದಿನದ ಸುದ್ದಿ
ರಾಜ್ಯದಲ್ಲಿ ಕೋವಿಡ್ ಬಗ್ಗೆ ಎಚ್ಚರ ವಹಿಸಲು ಕೇಂದ್ರ ಸೂಚನೆ : ಸಿಎಂ ಬೊಮ್ಮಾಯಿ
ಸುದ್ದಿದಿನ, ಬೆಂಗಳೂರು: ರಾಷ್ಟ್ರದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬರುವ ಬುಧವಾರದಂದು ಪ್ರಧಾನಮಂತ್ರಿ ಚರ್ಚೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 8-10 ದಿನಗಳಿಂದ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಅಲ್ಪಮಟ್ಟದ ಪ್ರಕರಣಗಳು ಕಂಡುಬಂದಿದ್ದು ಹೆಚ್ಚು ಜಾಗ್ರತೆ ವಹಿಸುವಂತೆ ಈಗಾಗಲೇ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243