ದಿನದ ಸುದ್ದಿ

ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷಾ ಫಲಿತಾಂಶ ಪ್ರಕಟ : ಶೃತಿ ಶರ್ಮಾ ಮೊದಲನೆ ರ್‍ಯಾಂಕ್

Published

on

ಸುದ್ದಿದಿನ ಡೆಸ್ಕ್ : ಕೇಂದ್ರ ಲೋಕಸೇವಾ ಆಯೋಗ, 2021ನೇ ಸಾಲಿನ ಫಲಿತಾಂಶವನ್ನು ಪ್ರಕಟಿಸಿದೆ. ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಶೃತಿ ಶರ್ಮಾ ಮೊದಲನೆ ರ್‍ಯಾಂಕ್ ಪಡೆದರೆ, ಅನಿಕೇತ್ ಅಗರ್‌ವಾಲ್ 2ನೇ ರ್‍ಯಾಂಕ್ ಗಳಿಸಿದ್ದಾರೆ. ಗಾಮಿನಿ ಸಿಂಗಾಲ್ ಮೂರನೆ ರ್‍ಯಾಂಕ್ ಪಡೆದಿದ್ದಾರೆ ಎಂದು ಯುಪಿಎಸ್‌ಸಿ ಪ್ರಕಟಣೆ ತಿಳಿಸಿದೆ.

ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 685ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಸಾಮಾನ್ಯ ವರ್ಗದ 244, ಆರ್ಥಿಕವಾಗಿ ಹಿಂದುಳಿದ ವರ್ಗದ 73, ಹಿಂದುಳಿದ ವರ್ಗದ203, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ 60 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಯುವಪೀಳಿಗೆಯು ಆಡಳಿತ ಸೇವೆಯಲ್ಲಿ ಪ್ರಮುಖಪಾತ್ರ ವಹಿಸಲಿದ್ದು, ಆಜಾದಿ ಕಾ ಅಮೃತ ಮಹೋತ್ಸವ್ ಸಂದರ್ಭದಲ್ಲಿ ದೇಶ ಅಭಿವೃದ್ಧಿ ಪಥದತ್ತ ಮುನ್ನಡೆ ಸಾಧಿಸಲು ಯುವಕರು ಮುಂದಾಗಬೇಕು ಎಂದು ಟ್ವೀಟ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version