ದಿನದ ಸುದ್ದಿ
ಶೀಘ್ರವೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹ
ಸುದ್ದಿದಿನಡೆಸ್ಕ್:ಪ್ರಜಾಪ್ರಭುತ್ವ ದಿನದಂದು ಮಾನವ ಸರಪಳಿ ನೆಪದಲ್ಲಿ ಪ್ರಚಾರ ಗಿಟ್ಟಿಸಿದ ರಾಜ್ಯಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಶೀಘ್ರವೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಆಗ್ರಹಿಸಿದ್ದಾರೆ. ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ, ತಾಲೂಕು, ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ಏಕೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಆಗ್ರಹಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243