ದಿನದ ಸುದ್ದಿ

ಪ್ರತಿ ಭಾನುವಾರ ರಾತ್ರಿ ಕರ್ಫ್ಯೂ ಜಾರಿ..!

Published

on

ಸುದ್ದಿದಿನ, ಪಂಜಾಬ್: ಕೊರೋನಾ ವೈರಸ್ ಹಬ್ಬುವುದನ್ನು ತಡೆಯಲು ಸೆ.30ರವರೆಗೆ ಪ್ರತಿ ಭಾನುವಾರ ರಾತ್ರಿ ಕರ್ಫ್ಯೂ ಹೇರಲು ಪಂಜಾಬ್ ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಶನಿವಾರ ಹೇರುತ್ತಿದ್ದ ರಾತ್ರಿ ಕರ್ಫ್ಯೂವನ್ನು ಹಿಂತೆಗೆದುಕೊಳ್ಳಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ಹೊರಡಿಸಿದೆ. ಜೊತೆಗೆ ರಾಜ್ಯದ ಎಲ್ಲ ನಗರ ಪ್ರದೇಶಗಳಲ್ಲಿ ರಾತ್ರಿ 9.30 ರಿಂದ ಬೆಳಗ್ಗೆ 5 ಗಂಟೆವರೆಗೂ ಅನಗತ್ಯ ಸಂಚಾರಕ್ಕೆ ಈಗಲೂ ನಿರ್ಬಂಧ ವಿಧಿಸಲಾಗಿದೆ. ಪಂಜಾಬ್ ನಲ್ಲಿ ಈವರೆಗೆ 69,684 ಮಂದಿಗೆ ಕೊರೋನಾ ಸೋಂಕು ತಗುಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version