ದಿನದ ಸುದ್ದಿ

ಸಿಇಟಿ ಪರೀಕ್ಷೆ | ಬಳ್ಳಾರಿಯ ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ

Published

on

ಸುದ್ದಿದಿನ,ಬಳ್ಳಾರಿ: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಲಾಗುವ ಸಿಇಟಿ ಪರೀಕ್ಷೆ ಇಂದಿನಿಂದ ಎರಡು ನಗಳ ಕಾಲ ನಡೆಯುತ್ತಿದ್ದು, ಗಣಿ ನಾಡು ಬಳ್ಳಾರಿಯಲ್ಲಿ ಅಗತ್ಯ ಸಿದ್ಧತೆಗಳೊಂದಿಗೆ ಪರೀಕ್ಷೆ ಆರಂಭವಾಗಿವೆ.

ಬಳ್ಳಾರಿ, ಸಿರಗುಪ್ಲ ಹಾಗೂ ಹಡಗಲಿಯ ತಲಾ ಇಬ್ಬರು ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಸೇರಿದಂತೆ 6 ಜನ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಸಲು ಜಿಲ್ಲಾಡಳಿತವು ವ್ಯವಸ್ಥೆ ಮಾಡಿದೆ. ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಕರೆತಂದು ಅತ್ಯಂತ ಸುರಕ್ಷಿತವಾಗಿ ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದ್ದು, ಕೊರೊನಾ ವೈರಸ್ ದೃಢಪಟ್ಟಂತಹ ವಿದ್ಯಾರ್ಥಿಗಳಿಗೆ ಸಿ.ಇ.ಟಿ. ಪರೀಕ್ಷೆ ಬರೆಯಲು ಬಳ್ಳಾರಿಯ ಡೆಂಟಲ್ ಕಾಲೇಜ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version