ದಿನದ ಸುದ್ದಿ
ವೃತ್ತಿಪರ ಶಿಕ್ಷಣ ಪ್ರವೇಶ; ರಾಜ್ಯಾದ್ಯಂತ ಇದೇ 16 ಮತ್ತು 17 ರಂದು ಸಿಇಟಿ ಪರೀಕ್ಷೆ
ಸುದ್ದಿದಿನ ಡೆಸ್ಕ್ : ವಿವಿಧ ವೃತ್ತಿಪರ ಶಿಕ್ಷಣಕ್ಕೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಇದೇ 16ಮತ್ತು 17 ರಂದು ನಡೆಯಲಿದ್ದು, ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಇದೇ 16,17ರಂದು ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸರ್ಜಿಕಲ್ ಮಾಸ್ಕ್ ಬಳಸುವಂತೆ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯಾದ್ಯಂತ 11 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 6 ಸಾವಿರದ 264ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜೂನ್ 16 ರಂದು ಬೆಳಿಗ್ಗೆ 10.30 ರಿಂದ 10.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ ೩.೫೦ರವರೆಗೆ ಗಣಿತ ವಿಷಯ ಹಾಗೂ 17 ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮ ತಡೆಗೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಸುವ್ಯವಸ್ಥೆಗಾಗಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ಸ್ನೇಹಲ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 2ಸಾವಿರದ 328ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243