ದಿನದ ಸುದ್ದಿ
ಗೆಜೆಟೆಡ್ ಅಲ್ಲದ ಹುದ್ದೆಗಳ ನೇಮಕಾತಿಗೆ ಸಾಮಾನ್ಯ ಅರ್ಹತಾ ಪರೀಕ್ಷೆ : ಸಚಿವ ಡಾ. ಜಿತೇಂದ್ರ ಸಿಂಗ್
ಸುದ್ದಿದಿನ ಡೆಸ್ಕ್ : ಈ ವರ್ಷದಿಂದ ಗೆಜೆಟೆಡ್ ಅಲ್ಲದ ಹುದ್ದೆಗಳ ನೇಮಕಾತಿಗೆ ಸಾಮಾನ್ಯ ಅರ್ಹತಾ ಪರೀಕ್ಷೆ ಸಿಇಟಿ ನಡೆಯಲಿದ್ದು, ಅಂತಹ ಮೊದಲ ಪರೀಕ್ಷೆ ವರ್ಷಾಂತ್ಯದ ಮೊದಲು ನಡೆಸಲು ನಿರ್ಧರಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆಗಳ ಖಾತೆ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ನವದೆಹಲಿಯಲ್ಲಿ ಭಾನುವಾರ ಸಿಬ್ಬಂದಿ ಮತ್ತು ತರಬೇತಿ ಡಿಒಪಿಡಿ ಅಡಿಯಲ್ಲಿ ಎಲ್ಲಾ ಆರು ಸ್ವಾಯತ್ತ ಸಂಸ್ಥೆಗಳ ಜಂಟಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿಒಪಿಟಿ ಅಡಿಯಲ್ಲಿ ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಎನ್.ಆರ್.ಎ. ಕಂಪ್ಯೂಟರ್ ಆಧಾರಿತ ಆನ್ ಲೈನ್ ಸಾಮಾನ್ಯ ಅರ್ಹತಾ ಪರೀಕ್ಷೆ ಸಿಇಟಿಯನ್ನು ನೇಮಕಾತಿಗಾಗಿ ನಡೆಸಲು ಸಜ್ಜಾಗಿದೆ. ದೇಶದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಪರೀಕ್ಷಾ ಕೇಂದ್ರದ ಮೂಲಕ ಉದ್ಯೋಗ ಆಕಾಂಕ್ಷಿಗಳಿಗೆ ಸುಲಭವಾಗಿ ನೇಮಕಾತಿ ಅವಕಾಶ ದೊರಕುವಂತೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243