ದಿನದ ಸುದ್ದಿ

ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿರುವ ವೃತ್ತಿಪರ ಇಂಜಿನಿಯರಿಂಗ್ ಹಾಗೂ ಇತರ ಪದವೀ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಆರ್ಕಿಟ್ಕೆಟ್ ಸೇರಿದಂತೆ ಹಲವು ಪದವೀ ಕೋರ್ಸ್‌ಗಳಿಗೆ ಸಿಇಟಿ ಮೂಲಕ ಪ್ರವೇಶ ಪರೀಕ್ಷೆ ನಾಳೆಯಿಂದ ಆರಂಭವಾಗಲಿದೆ. ನಾಳೆ ಮತ್ತು ನಾಡಿದ್ದು, ಗಣಿತ, ರಾಸಾಯನ ಶಾಸ್ತ್ರ, ಭೌತಶಾಸ್ತ್ರ ಹಾಗೂ ಜೀವ ಶಾಸ್ತ್ರ ವಿಷಯಗಳ ಬಗ್ಗೆ ಪರೀಕ್ಷೆ ನಡೆಯಲಿದೆ. 18ರಂದು ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version