ದಿನದ ಸುದ್ದಿ
ದಾವಣಗೆರೆ | ಸಿಇಟಿ ಪರೀಕ್ಷೆ ಹಾಜರಾತಿ ವಿವರ
ಸುದ್ದಿದಿನ,ದಾವಣಗೆರೆ : ನಗರದ 13 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಚನ್ನಗಿರಿ, ಹರಿಹರ, ಹೊನ್ನಾಳಿಯ ತಲಾ 1 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಯಿತು.
ಬೆಳಿಗ್ಗೆ ನಡೆದ ಜೀವಶಾಸ್ತ್ರ ಸಾಮಾನ್ಯ ಪ್ರವೇಶ ಪರೀಕ್ಷೆಗೆ 6976 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 6011 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಗದ್ದು, 965 ವಿದ್ಯಾರ್ಥಿಗಳು ಗೈರಾಗಿರುತ್ತಾರೆ.
ಮಧ್ಯಾಹ್ನ ನಡೆದ ಗಣಿತ ಸಾಮಾನ್ಯ ಪ್ರವೇಶ ಪರೀಕ್ಷೆಗೆ 6976 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು 6393 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 583 ವಿದ್ಯಾರ್ಥಿಗಳು ಗೈರಾಗಿದ್ದರು.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಇರುವ ಯಾವುದೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದಿಲ್ಲವೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243